Hebrews 1:9 in Kannada 9 ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾದ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.
Other Translations King James Version (KJV) Thou hast loved righteousness, and hated iniquity; therefore God, even thy God, hath anointed thee with the oil of gladness above thy fellows.
American Standard Version (ASV) Thou hast loved righteousness, and hated iniquity; Therefore God, thy God, hath anointed thee With the oil of gladness above thy fellows.
Bible in Basic English (BBE) You have been a lover of righteousness and a hater of evil; and so God, your God, has put the oil of joy on your head more than on the heads of those who are with you.
Darby English Bible (DBY) Thou hast loved righteousness and hast hated lawlessness; therefore God, thy God, has anointed thee with oil of gladness above thy companions.
World English Bible (WEB) You have loved righteousness, and hated iniquity; Therefore God, your God, has anointed you with the oil of gladness above your fellows."
Young's Literal Translation (YLT) thou didst love righteousness, and didst hate lawlessness; because of this did He anoint thee -- God, thy God -- with oil of gladness above thy partners;'
Cross Reference Psalm 2:2 in Kannada 2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
Psalm 2:6 in Kannada 6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
Psalm 11:5 in Kannada 5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
Psalm 23:5 in Kannada 5 ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನನ್ನು ಅಥಿತಿಯಂತ್ತೆ ಸ್ವಿಕರಿಸಿ, ನನ್ನ ತಲೆಗೆ ತೈಲವನ್ನು ಹಚ್ಚಿ ನನ್ನ ಧಣಿವಾರಿಸುವಿ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
Psalm 33:5 in Kannada 5 ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.
Psalm 37:28 in Kannada 28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
Psalm 40:8 in Kannada 8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೊಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.
Psalm 45:7 in Kannada 7 ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
Psalm 89:20 in Kannada 20 ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
Psalm 89:26 in Kannada 26 ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.
Psalm 119:104 in Kannada 104 ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ.
Psalm 119:128 in Kannada 128 ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.
Proverbs 8:13 in Kannada 13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
Isaiah 61:1 in Kannada 1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
Isaiah 61:3 in Kannada 3 ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
Isaiah 61:8 in Kannada 8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
Amos 5:15 in Kannada 15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.
Zechariah 8:17 in Kannada 17 ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”
Luke 4:18 in Kannada 18 “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
John 1:41 in Kannada 41 ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,
John 3:34 in Kannada 34 ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
John 20:17 in Kannada 17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
Acts 4:27 in Kannada 27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
Acts 10:38 in Kannada 38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
Romans 12:9 in Kannada 9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
Romans 15:13 in Kannada 13 ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
1 Corinthians 1:9 in Kannada 9 ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
2 Corinthians 11:31 in Kannada 31 ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೆಂದು ಬಲ್ಲೆನು.
Galatians 5:22 in Kannada 22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
Ephesians 1:3 in Kannada 3 ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮಿಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
Philippians 2:9 in Kannada 9 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
Hebrews 2:11 in Kannada 11 ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
Hebrews 7:26 in Kannada 26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
1 Peter 1:3 in Kannada 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
1 John 1:3 in Kannada 3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
Revelation 2:6 in Kannada 6 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.
Revelation 2:15 in Kannada 15 ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.