Cross Reference Exodus 29:4 in Kannada 4 ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.
Leviticus 8:6 in Kannada 6 ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.
Leviticus 14:7 in Kannada 7 ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
Numbers 8:7 in Kannada 7 ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
Numbers 19:18 in Kannada 18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
1 Kings 15:3 in Kannada 3 ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.
1 Chronicles 12:33 in Kannada 33 ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು.
1 Chronicles 28:9 in Kannada 9 ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
1 Chronicles 29:17 in Kannada 17 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
Psalm 9:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
Psalm 32:11 in Kannada 11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
Psalm 51:10 in Kannada 10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
Psalm 73:28 in Kannada 28 ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.
Psalm 84:11 in Kannada 11 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?
Psalm 94:15 in Kannada 15 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
Psalm 111:1 in Kannada 1 ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.
Psalm 119:2 in Kannada 2 ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
Psalm 119:7 in Kannada 7 ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.
Psalm 119:10 in Kannada 10 ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
Psalm 119:34 in Kannada 34 ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
Psalm 119:58 in Kannada 58 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.
Psalm 119:69 in Kannada 69 ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
Psalm 119:80 in Kannada 80 ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.
Psalm 119:145 in Kannada 145 ಖೋಫ್. ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.
Proverbs 23:26 in Kannada 26 ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.
Isaiah 29:13 in Kannada 13 ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Isaiah 52:15 in Kannada 15 ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.
Jeremiah 3:10 in Kannada 10 ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.
Jeremiah 24:7 in Kannada 7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.
Jeremiah 30:21 in Kannada 21 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”
Ezekiel 16:9 in Kannada 9 “ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
Ezekiel 36:25 in Kannada 25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
Zechariah 13:1 in Kannada 1 ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
Matthew 3:11 in Kannada 11 ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
Matthew 21:21 in Kannada 21 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
Mark 11:23 in Kannada 23 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
John 3:5 in Kannada 5 ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
John 8:9 in Kannada 9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.
John 13:8 in Kannada 8 ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.
Acts 8:21 in Kannada 21 ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
1 Corinthians 6:11 in Kannada 11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
2 Corinthians 7:1 in Kannada 1 ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಶವನ್ನು ಶುದ್ಧೀಕರಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತ್ತೆಗೆ ಪ್ರಯತ್ನಿಸೋಣ.
Ephesians 3:12 in Kannada 12 ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
Ephesians 5:26 in Kannada 26 ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
Ephesians 6:5 in Kannada 5 ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
1 Timothy 4:2 in Kannada 2 ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,
Titus 3:5 in Kannada 5 ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
Hebrews 4:16 in Kannada 16 ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
Hebrews 7:19 in Kannada 19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
Hebrews 9:10 in Kannada 10 ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
Hebrews 9:13 in Kannada 13 ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,
Hebrews 9:19 in Kannada 19 ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.
Hebrews 10:19 in Kannada 19 ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
Hebrews 11:28 in Kannada 28 ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.
Hebrews 12:24 in Kannada 24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
James 1:6 in Kannada 6 ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿತ್ತಾನೆ.
James 4:8 in Kannada 8 ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
1 Peter 1:2 in Kannada 2 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
1 Peter 3:21 in Kannada 21 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
1 John 3:19 in Kannada 19 ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
Revelation 1:5 in Kannada 5 ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,