Hebrews 10:25 in Kannada 25 ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
Other Translations King James Version (KJV) Not forsaking the assembling of ourselves together, as the manner of some is; but exhorting one another: and so much the more, as ye see the day approaching.
American Standard Version (ASV) not forsaking our own assembling together, as the custom of some is, but exhorting `one another'; and so much the more, as ye see the day drawing nigh.
Bible in Basic English (BBE) Not giving up our meetings, as is the way of some, but keeping one another strong in faith; and all the more because you see the day coming near.
Darby English Bible (DBY) not forsaking the assembling of ourselves together, as the custom [is] with some; but encouraging [one another], and by so much the more as ye see the day drawing near.
World English Bible (WEB) not forsaking our own assembling together, as the custom of some is, but exhorting one another; and so much the more, as you see the Day approaching.
Young's Literal Translation (YLT) not forsaking the assembling of ourselves together, as a custom of certain `is', but exhorting, and so much the more as ye see the day coming nigh.
Cross Reference Matthew 18:20 in Kannada 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
Matthew 24:33 in Kannada 33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
Mark 13:29 in Kannada 29 ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
John 20:19 in Kannada 19 ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.
Acts 1:13 in Kannada 13 ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
Acts 2:1 in Kannada 1 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
Acts 2:42 in Kannada 42 ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
Acts 16:16 in Kannada 16 ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ಸ್ತ್ರೀಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
Acts 20:7 in Kannada 7 ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
Romans 12:8 in Kannada 8 ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
Romans 13:11 in Kannada 11 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
1 Corinthians 3:13 in Kannada 13 ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
1 Corinthians 5:4 in Kannada 4 ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
1 Corinthians 11:17 in Kannada 17 ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.
1 Corinthians 11:20 in Kannada 20 ನೀವೆಲ್ಲರು ಸೇರಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.
1 Corinthians 14:3 in Kannada 3 ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.
1 Corinthians 14:23 in Kannada 23 ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?
Philippians 4:5 in Kannada 5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.
1 Thessalonians 4:18 in Kannada 18 ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.
1 Thessalonians 5:11 in Kannada 11 ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
Hebrews 3:13 in Kannada 13 ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
Hebrews 10:24 in Kannada 24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
James 5:8 in Kannada 8 ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.
1 Peter 4:7 in Kannada 7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
2 Peter 3:9 in Kannada 9 ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
2 Peter 3:11 in Kannada 11 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
2 Peter 3:14 in Kannada 14 ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
Jude 1:19 in Kannada 19 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.