Hebrews 11:27 in Kannada 27 ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
Other Translations King James Version (KJV) By faith he forsook Egypt, not fearing the wrath of the king: for he endured, as seeing him who is invisible.
American Standard Version (ASV) By faith he forsook Egypt, not fearing the wrath of the king: for he endured, as seeing him who is invisible.
Bible in Basic English (BBE) By faith he went out of Egypt, not being turned from his purpose by fear of the wrath of the king; for he kept on his way, as seeing him who is unseen.
Darby English Bible (DBY) By faith he left Egypt, not fearing the wrath of the king; for he persevered, as seeing him who is invisible.
World English Bible (WEB) By faith, he left Egypt, not fearing the wrath of the king; for he endured, as seeing him who is invisible.
Young's Literal Translation (YLT) by faith he left Egypt behind, not having been afraid of the wrath of the king, for, as seeing the Invisible One -- he endured;
Cross Reference Exodus 2:14 in Kannada 14 ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.
Exodus 4:19 in Kannada 19 ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
Exodus 10:28 in Kannada 28 ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು.
Exodus 11:8 in Kannada 8 ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
Exodus 12:11 in Kannada 11 ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.
Exodus 12:37 in Kannada 37 ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.
Exodus 12:50 in Kannada 50 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.
Exodus 13:17 in Kannada 17 ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
Exodus 14:10 in Kannada 10 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.
Psalm 16:8 in Kannada 8 ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
Matthew 10:22 in Kannada 22 ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
Matthew 24:13 in Kannada 13 ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
Mark 4:17 in Kannada 17 ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
Mark 13:13 in Kannada 13 ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
Acts 2:25 in Kannada 25 ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
1 Corinthians 13:7 in Kannada 7 ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
2 Corinthians 4:18 in Kannada 18 ನಾವು ಕಾಣುವಂಥದ್ದನ್ನು ಲೆಕ್ಕಿಸದೇ ಕಾಣದಿರುವಂಥದ್ದನ್ನು ಎದುರು ನೋಡದೆ ಕಾಣದಿರುವಂಥದ್ದನ್ನು ಲೆಕ್ಕಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. ನಿತ್ಯನಿರಂತರವಾದುದೂ ಆಗಿದೆ.
1 Timothy 1:17 in Kannada 17 ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
1 Timothy 6:16 in Kannada 16 ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
Hebrews 6:15 in Kannada 15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.
Hebrews 10:32 in Kannada 32 ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
Hebrews 11:1 in Kannada 1 ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳು ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.
Hebrews 11:13 in Kannada 13 ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.
James 5:11 in Kannada 11 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
1 Peter 1:8 in Kannada 8 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.