Hebrews 11:32 in Kannada 32 ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
Other Translations King James Version (KJV) And what shall I more say? for the time would fail me to tell of Gedeon, and of Barak, and of Samson, and of Jephthae; of David also, and Samuel, and of the prophets:
American Standard Version (ASV) And what shall I more say? for the time will fail me if I tell of Gideon, Barak, Samson, Jephthah; of David and Samuel and the prophets:
Bible in Basic English (BBE) What more am I to say? For there would not be time to give the stories of Gideon, Barak, Samson, and Jephthah, of David and Samuel and the prophets:
Darby English Bible (DBY) And what more do I say? For the time would fail me telling of Gideon, and Barak, and Samson, and Jephthah, and David and Samuel, and of the prophets:
World English Bible (WEB) What more shall I say? For the time would fail me if I told of Gideon, Barak, Samson, Jephthah, David, Samuel, and the prophets;
Young's Literal Translation (YLT) And what shall I yet say? for the time will fail me recounting about Gideon, Barak also, and Samson, and Jephthah, David also, and Samuel, and the prophets,
Cross Reference Judges 4:1 in Kannada 1 ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.
Judges 6:11 in Kannada 11 ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
Judges 11:1 in Kannada 1 ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.
Judges 13:1 in Kannada 1 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರುಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.
Judges 13:24 in Kannada 24 ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.
1 Samuel 1:20 in Kannada 20 ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
1 Samuel 2:11 in Kannada 11 ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
1 Samuel 2:18 in Kannada 18 ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
1 Samuel 3:1 in Kannada 1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
1 Samuel 12:11 in Kannada 11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.
1 Samuel 16:1 in Kannada 1 ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
1 Samuel 16:13 in Kannada 13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
1 Samuel 17:1 in Kannada 1 ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಆಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು.
1 Samuel 28:3 in Kannada 3 ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
Psalm 99:6 in Kannada 6 ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
Jeremiah 15:1 in Kannada 1 ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
Matthew 5:12 in Kannada 12 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
Luke 13:28 in Kannada 28 ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
Luke 16:31 in Kannada 31 ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
John 21:25 in Kannada 25 ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
Acts 2:29 in Kannada 29 “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
Acts 3:24 in Kannada 24 ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.
Acts 10:43 in Kannada 43 ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.
Acts 13:20 in Kannada 20 ಇಷ್ಟರೊಳಗೆ ಸುಮಾರು ನಾನೂರೈವತ್ತು ವರುಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
Acts 13:22 in Kannada 22 ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
Romans 3:5 in Kannada 5 ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮಾನುಷಿಕವಾದ ರೀತಿಯಲ್ಲಿ ಆಡುತ್ತಿದ್ದೇನೆ.
Romans 4:1 in Kannada 1 ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?
Romans 6:1 in Kannada 1 ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
Romans 7:7 in Kannada 7 ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
James 5:10 in Kannada 10 ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
1 Peter 1:10 in Kannada 10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
2 Peter 1:21 in Kannada 21 ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
2 Peter 3:2 in Kannada 2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.