Hebrews 11:34 in Kannada 34 ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.
Other Translations King James Version (KJV) Quenched the violence of fire, escaped the edge of the sword, out of weakness were made strong, waxed valiant in fight, turned to flight the armies of the aliens.
American Standard Version (ASV) quenched the power of fire, escaped the edge of the sword, from weakness were made strong, waxed mighty in war, turned to flight armies of aliens.
Bible in Basic English (BBE) Put out the power of fire, got safely away from the edge of the sword, were made strong when they had been feeble, became full of power in war, and put to flight the armies of the nations.
Darby English Bible (DBY) quenched [the] power of fire, escaped [the] edge of the sword, became strong out of weakness, became mighty in war, made [the] armies of strangers give way.
World English Bible (WEB) quenched the power of fire, escaped the edge of the sword, from weakness were made strong, grew mighty in war, and turned to flight armies of aliens.
Young's Literal Translation (YLT) quenched the power of fire, escaped the mouth of the sword, were made powerful out of infirmities, became strong in battle, caused to give way camps of the aliens.
Cross Reference Judges 7:19 in Kannada 19 ಮಧ್ಯರಾತ್ರಿಯ ಮೊದಲನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
Judges 8:4 in Kannada 4 ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.
Judges 15:8 in Kannada 8 ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.
Judges 15:14 in Kannada 14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಬಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.
Judges 16:19 in Kannada 19 ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
1 Samuel 14:13 in Kannada 13 ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.
1 Samuel 17:51 in Kannada 51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.
1 Samuel 20:1 in Kannada 1 ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,
2 Samuel 8:1 in Kannada 1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2 Samuel 10:15 in Kannada 15 ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.
2 Samuel 21:16 in Kannada 16 ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೇಕೆಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
1 Kings 19:3 in Kannada 3 ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
2 Kings 6:16 in Kannada 16 ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,
2 Kings 6:32 in Kannada 32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.
2 Kings 20:7 in Kannada 7 ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದುಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
2 Chronicles 14:11 in Kannada 11 ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
2 Chronicles 16:1 in Kannada 1 ಆಸನ ಅಳ್ವಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
2 Chronicles 20:6 in Kannada 6 “ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
2 Chronicles 32:20 in Kannada 20 ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
Job 5:20 in Kannada 20 ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.
Job 42:10 in Kannada 10 ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.
Psalm 6:8 in Kannada 8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
Psalm 66:12 in Kannada 12 ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
Psalm 144:10 in Kannada 10 ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
Isaiah 43:2 in Kannada 2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
Jeremiah 26:24 in Kannada 24 ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
Daniel 3:19 in Kannada 19 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
2 Corinthians 12:9 in Kannada 9 ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ನಿನ್ನೊಂದಿಗಿರುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
1 Peter 4:12 in Kannada 12 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.