Hebrews 11:37 in Kannada 37 ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
Other Translations King James Version (KJV) They were stoned, they were sawn asunder, were tempted, were slain with the sword: they wandered about in sheepskins and goatskins; being destitute, afflicted, tormented;
American Standard Version (ASV) they were stoned, they were sawn asunder, they were tempted, they were slain with the sword: they went about in sheepskins, in goatskins; being destitute, afflicted, ill-treated
Bible in Basic English (BBE) They were stoned, they were cut up with knives, they were tested, they were put to death with the sword, they went about in sheepskins and in goatskins; being poor and in pain and cruelly attacked,
Darby English Bible (DBY) They were stoned, were sawn asunder, were tempted, died by the death of the sword; they went about in sheepskins, in goatskins, destitute, afflicted, evil treated,
World English Bible (WEB) They were stoned. They were sawn apart. They were tempted. They were slain with the sword. They went around in sheep skins and in goat skins; being destitute, afflicted, ill-treated
Young's Literal Translation (YLT) they were stoned, they were sawn asunder, they were tried; in the killing of the sword they died; they went about in sheepskins, in goatskins -- being destitute, afflicted, injuriously treated,
Cross Reference 1 Samuel 22:17 in Kannada 17 ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.
1 Kings 18:4 in Kannada 4 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
1 Kings 18:13 in Kannada 13 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
1 Kings 19:1 in Kannada 1 ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
1 Kings 19:10 in Kannada 10 ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
1 Kings 19:14 in Kannada 14 ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಭಂದನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
1 Kings 21:10 in Kannada 10 ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.
1 Kings 21:13 in Kannada 13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
2 Kings 1:8 in Kannada 8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
2 Chronicles 24:21 in Kannada 21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
Jeremiah 2:30 in Kannada 30 ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
Jeremiah 26:23 in Kannada 23 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
Lamentations 4:13 in Kannada 13 ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
Zechariah 13:9 in Kannada 9 “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
Matthew 3:4 in Kannada 4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
Matthew 8:20 in Kannada 20 ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
Matthew 21:35 in Kannada 35 ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.
Matthew 23:35 in Kannada 35 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
Luke 13:34 in Kannada 34 ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
John 10:31 in Kannada 31 ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,
Acts 7:52 in Kannada 52 ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
Acts 7:58 in Kannada 58 ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
Acts 12:2 in Kannada 2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
Acts 14:19 in Kannada 19 ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
1 Corinthians 4:9 in Kannada 9 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದರಾದೆವು.
2 Corinthians 11:23 in Kannada 23 ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
2 Corinthians 12:10 in Kannada 10 ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
Hebrews 12:1 in Kannada 1 ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
James 5:10 in Kannada 10 ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
Revelation 11:3 in Kannada 3 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”