Hebrews 12:1 in Kannada 1 ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
Other Translations King James Version (KJV) Wherefore seeing we also are compassed about with so great a cloud of witnesses, let us lay aside every weight, and the sin which doth so easily beset us, and let us run with patience the race that is set before us,
American Standard Version (ASV) Therefore let us also, seeing we are compassed about with so great a cloud of witnesses, lay aside every weight, and the sin which doth so easily beset us, and let us run with patience the race that is set before us,
Bible in Basic English (BBE) For this reason, as we are circled by so great a cloud of witnesses, putting off every weight, and the sin into which we come so readily, let us keep on running in the way which is marked out for us,
Darby English Bible (DBY) Let *us* also therefore, having so great a cloud of witnesses surrounding us, laying aside every weight, and sin which so easily entangles us, run with endurance the race that lies before us,
World English Bible (WEB) Therefore let us also, seeing we are surrounded by so great a cloud of witnesses, lay aside every weight and the sin which so easily entangles us, and let us run with patience the race that is set before us,
Young's Literal Translation (YLT) Therefore, we also having so great a cloud of witnesses set around us, every weight having put off, and the closely besetting sin, through endurance may we run the contest that is set before us,
Cross Reference Psalm 18:23 in Kannada 23 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
Isaiah 60:8 in Kannada 8 ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?
Ezekiel 38:9 in Kannada 9 ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”
Ezekiel 38:16 in Kannada 16 ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”
Matthew 10:22 in Kannada 22 ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
Matthew 10:37 in Kannada 37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
Matthew 24:13 in Kannada 13 ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
Luke 8:14 in Kannada 14 ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
Luke 9:59 in Kannada 59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
Luke 12:15 in Kannada 15 ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
Luke 14:26 in Kannada 26 “ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
Luke 16:28 in Kannada 28 ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.
Luke 18:22 in Kannada 22 ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Luke 21:34 in Kannada 34 “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
John 3:32 in Kannada 32 ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
John 4:39 in Kannada 39 “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದ” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
John 4:44 in Kannada 44 ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.
Romans 2:7 in Kannada 7 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
Romans 5:3 in Kannada 3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.
Romans 8:24 in Kannada 24 ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?
Romans 12:12 in Kannada 12 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
Romans 13:11 in Kannada 11 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
1 Corinthians 9:24 in Kannada 24 ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
2 Corinthians 7:1 in Kannada 1 ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಶವನ್ನು ಶುದ್ಧೀಕರಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತ್ತೆಗೆ ಪ್ರಯತ್ನಿಸೋಣ.
Galatians 5:7 in Kannada 7 ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?
Ephesians 4:22 in Kannada 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
Philippians 2:16 in Kannada 16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
Philippians 3:10 in Kannada 10 ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
Colossians 3:5 in Kannada 5 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
1 Timothy 6:9 in Kannada 9 ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
2 Timothy 2:4 in Kannada 4 ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
2 Timothy 4:7 in Kannada 7 ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
Hebrews 6:15 in Kannada 15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.
Hebrews 10:35 in Kannada 35 ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
Hebrews 11:2 in Kannada 2 ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು.
James 1:3 in Kannada 3 ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
James 5:7 in Kannada 7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
1 Peter 2:1 in Kannada 1 ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.
1 Peter 4:2 in Kannada 2 ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
1 Peter 5:12 in Kannada 12 ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
2 Peter 1:6 in Kannada 6 ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ,
1 John 2:15 in Kannada 15 ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
Revelation 1:9 in Kannada 9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.
Revelation 3:10 in Kannada 10 ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
Revelation 13:10 in Kannada 10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.
Revelation 22:16 in Kannada 16 “ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”