Hebrews 12:15 in Kannada 15 ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
Other Translations King James Version (KJV) Looking diligently lest any man fail of the grace of God; lest any root of bitterness springing up trouble you, and thereby many be defiled;
American Standard Version (ASV) looking carefully lest `there be' any man that falleth short of the grace of God; lest any root of bitterness springing up trouble `you', and thereby the many be defiled;
Bible in Basic English (BBE) Looking with care to see that no man among you in his behaviour comes short of the grace of God; for fear that some bitter root may come up to be a trouble to you, and that some of you may be made unclean by it;
Darby English Bible (DBY) watching lest [there be] any one who lacks the grace of God; lest any root of bitterness springing up trouble [you], and many be defiled by it;
World English Bible (WEB) looking carefully lest there be any man who falls short of the grace of God; lest any root of bitterness springing up trouble you, and thereby the many be defiled;
Young's Literal Translation (YLT) looking diligently over lest any one be failing of the grace of God, lest any root of bitterness springing up may give trouble, and through this many may be defiled;
Cross Reference Exodus 32:21 in Kannada 21 ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,
Deuteronomy 4:9 in Kannada 9 ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
Deuteronomy 29:18 in Kannada 18 “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
Deuteronomy 32:32 in Kannada 32 ಅವರು ಸೊದೋಮ್ಯರೆಂಬ ದ್ರಾಕ್ಷೇಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷೇಹಣ್ಣು ವಿಷದ ದ್ರಾಕ್ಷೇಹಣ್ಣು; ಅದರ ಗೊಂಚಲು ಕಹಿ.
Joshua 6:18 in Kannada 18 ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.
Joshua 7:25 in Kannada 25 ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Joshua 22:17 in Kannada 17 ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.
1 Kings 14:16 in Kannada 16 ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.
Proverbs 4:23 in Kannada 23 ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
Isaiah 5:4 in Kannada 4 ನನ್ನ ದ್ರಾಕ್ಷೆಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷೆಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
Isaiah 5:7 in Kannada 7 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
Jeremiah 2:21 in Kannada 21 “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೆಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
Matthew 7:16 in Kannada 16 ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?
Luke 22:32 in Kannada 32 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
Acts 20:30 in Kannada 30 ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
1 Corinthians 5:6 in Kannada 6 ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲೆಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
1 Corinthians 9:24 in Kannada 24 ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
1 Corinthians 10:12 in Kannada 12 ಆದಕಾರಣ ನಿಂತಿದ್ದೇನೆಂದು ತಿಳಿದಿರುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
1 Corinthians 13:8 in Kannada 8 ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
1 Corinthians 15:33 in Kannada 33 ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”
2 Corinthians 6:1 in Kannada 1 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
2 Corinthians 13:5 in Kannada 5 ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ನೀವು ಒಳ್ಳೆಯವರಾಗಿದ್ದರೆ, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆ ಪರೀಕ್ಷಿಗೆ ಒಳ್ಳಗಾದವರೇ.
Galatians 2:13 in Kannada 13 ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
Galatians 5:4 in Kannada 4 ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.
Ephesians 5:3 in Kannada 3 ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
Colossians 3:5 in Kannada 5 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
2 Timothy 2:16 in Kannada 16 ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
Hebrews 2:1 in Kannada 1 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
Hebrews 3:12 in Kannada 12 ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
Hebrews 4:1 in Kannada 1 ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
Hebrews 4:11 in Kannada 11 ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
Hebrews 6:11 in Kannada 11 ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
Hebrews 10:23 in Kannada 23 ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
2 Peter 1:10 in Kannada 10 ಆದ್ದರಿಂದ ಪ್ರಿಯರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
2 Peter 2:1 in Kannada 1 ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2 Peter 2:18 in Kannada 18 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
2 Peter 3:11 in Kannada 11 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
2 Peter 3:14 in Kannada 14 ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
2 John 1:8 in Kannada 8 ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
Jude 1:20 in Kannada 20 ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.