Cross Reference Psalm 16:9 in Kannada 9 ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು.
Psalm 22:6 in Kannada 6 ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
Psalm 69:19 in Kannada 19 ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.
Psalm 110:1 in Kannada 1 ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
Psalm 138:8 in Kannada 8 ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.
Isaiah 8:17 in Kannada 17 ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.
Isaiah 31:1 in Kannada 1 ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
Isaiah 45:22 in Kannada 22 ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
Isaiah 49:6 in Kannada 6 ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
Isaiah 50:6 in Kannada 6 ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.
Isaiah 53:3 in Kannada 3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
Isaiah 53:10 in Kannada 10 ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
Micah 7:7 in Kannada 7 ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.
Zechariah 12:10 in Kannada 10 ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
Matthew 16:21 in Kannada 21 ಅಂದಿನಿಂದ ಯೇಸು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
Matthew 20:18 in Kannada 18 “ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
Matthew 20:28 in Kannada 28 ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
Matthew 26:67 in Kannada 67 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,
Matthew 27:27 in Kannada 27 ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
Mark 9:12 in Kannada 12 ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
Mark 9:24 in Kannada 24 ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
Mark 14:36 in Kannada 36 “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
Luke 17:5 in Kannada 5 ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
Luke 23:11 in Kannada 11 ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
Luke 23:35 in Kannada 35 ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
Luke 24:26 in Kannada 26 ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.
John 1:29 in Kannada 29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
John 6:40 in Kannada 40 ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
John 8:56 in Kannada 56 ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು.
John 12:24 in Kannada 24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
John 12:27 in Kannada 27 ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
John 12:32 in Kannada 32 ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
John 13:3 in Kannada 3 ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
John 13:31 in Kannada 31 ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.
John 17:1 in Kannada 1 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
Acts 2:25 in Kannada 25 ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
Acts 2:36 in Kannada 36 “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
Acts 5:31 in Kannada 31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
Acts 5:41 in Kannada 41 ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
1 Corinthians 1:7 in Kannada 7 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮಿಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
Ephesians 2:16 in Kannada 16 ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.
Ephesians 5:2 in Kannada 2 ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
Philippians 1:6 in Kannada 6 ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
Philippians 2:8 in Kannada 8 ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
Philippians 3:20 in Kannada 20 ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
2 Timothy 4:8 in Kannada 8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
Titus 2:13 in Kannada 13 ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
Hebrews 1:3 in Kannada 3 ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧೀಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Hebrews 1:13 in Kannada 13 ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?
Hebrews 2:7 in Kannada 7 ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
Hebrews 5:9 in Kannada 9 ಇದಲ್ಲದೆ ಆತನು ಪರಿಪೂರ್ಣಗೊಳಿಸಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
Hebrews 7:19 in Kannada 19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
Hebrews 8:1 in Kannada 1 ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
Hebrews 9:28 in Kannada 28 ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
Hebrews 10:5 in Kannada 5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “ದೇವರೇ, ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
Hebrews 10:14 in Kannada 14 ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
Hebrews 10:33 in Kannada 33 ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
Hebrews 11:36 in Kannada 36 ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
Hebrews 12:3 in Kannada 3 ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
Hebrews 13:13 in Kannada 13 ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.
1 Peter 1:11 in Kannada 11 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
1 Peter 2:23 in Kannada 23 ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
1 Peter 3:18 in Kannada 18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
1 Peter 3:22 in Kannada 22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
1 Peter 4:14 in Kannada 14 ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.
1 John 1:1 in Kannada 1 ನಾವು ನಿಮಗೆ ಪ್ರಚೂರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.
Jude 1:21 in Kannada 21 ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
Revelation 1:8 in Kannada 8 “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.
Revelation 1:11 in Kannada 11 ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.
Revelation 1:17 in Kannada 17 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,
Revelation 2:8 in Kannada 8 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,