Hebrews 12:22 in Kannada 22 ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,
Other Translations King James Version (KJV) But ye are come unto mount Sion, and unto the city of the living God, the heavenly Jerusalem, and to an innumerable company of angels,
American Standard Version (ASV) but ye are come unto mount Zion, and unto the city of the living God, the heavenly Jerusalem, and to innumerable hosts of angels,
Bible in Basic English (BBE) But you have come to the mountain of Zion, to the place of the living God, to the Jerusalem which is in heaven, and to an army of angels which may not be numbered,
Darby English Bible (DBY) but ye have come to mount Zion; and to [the] city of [the] living God, heavenly Jerusalem; and to myriads of angels,
World English Bible (WEB) But you have come to Mount Zion, and to the city of the living God, the heavenly Jerusalem, and to innumerable hosts of angels,
Young's Literal Translation (YLT) But, ye came to Mount Zion, and to a city of the living God, to the heavenly Jerusalem, and to myriads of messengers,
Cross Reference Deuteronomy 5:26 in Kannada 26 ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?
Deuteronomy 33:2 in Kannada 2 “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
Joshua 3:10 in Kannada 10 “ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
2 Kings 19:4 in Kannada 4 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಯೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
Psalm 2:6 in Kannada 6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
Psalm 42:2 in Kannada 2 ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?
Psalm 48:2 in Kannada 2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
Psalm 68:17 in Kannada 17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾನೆ.
Psalm 84:2 in Kannada 2 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
Psalm 87:3 in Kannada 3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
Psalm 132:13 in Kannada 13 ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
Isaiah 12:6 in Kannada 6 ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
Isaiah 14:32 in Kannada 32 ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.
Isaiah 28:16 in Kannada 16 ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
Isaiah 51:11 in Kannada 11 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
Isaiah 51:16 in Kannada 16 ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
Isaiah 59:20 in Kannada 20 “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.
Isaiah 60:14 in Kannada 14 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
Jeremiah 10:10 in Kannada 10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
Daniel 6:26 in Kannada 26 “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
Daniel 7:10 in Kannada 10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
Hosea 1:10 in Kannada 10 ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
Joel 2:32 in Kannada 32 ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
Matthew 5:35 in Kannada 35 ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ.
Matthew 16:16 in Kannada 16 ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
Romans 9:26 in Kannada 26 ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.
Romans 11:26 in Kannada 26 ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
Galatians 4:26 in Kannada 26 ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.
Philippians 3:20 in Kannada 20 ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
1 Thessalonians 1:9 in Kannada 9 ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ
Hebrews 3:12 in Kannada 12 ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
Hebrews 9:14 in Kannada 14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
Hebrews 10:31 in Kannada 31 ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
Hebrews 11:10 in Kannada 10 ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
Hebrews 13:14 in Kannada 14 ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.
Jude 1:14 in Kannada 14 ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,
Revelation 3:12 in Kannada 12 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
Revelation 5:11 in Kannada 11 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
Revelation 7:2 in Kannada 2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,
Revelation 14:1 in Kannada 1 ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
Revelation 21:2 in Kannada 2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
Revelation 21:10 in Kannada 10 ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.
Revelation 22:19 in Kannada 19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.