Hebrews 12:23 in Kannada 23 ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
Other Translations King James Version (KJV) To the general assembly and church of the firstborn, which are written in heaven, and to God the Judge of all, and to the spirits of just men made perfect,
American Standard Version (ASV) to the general assembly and church of the firstborn who are enrolled in heaven, and to God the Judge of all, and to the spirits of just men made perfect,
Bible in Basic English (BBE) To the great meeting and church of the first of those who are named in heaven, and to God the judge of all, and to the spirits of good men made complete,
Darby English Bible (DBY) the universal gathering; and to [the] assembly of the firstborn [who are] registered in heaven; and to God, judge of all; and to [the] spirits of just [men] made perfect;
World English Bible (WEB) to the general assembly and assembly of the firstborn who are enrolled in heaven, to God the Judge of all, to the spirits of just men made perfect,
Young's Literal Translation (YLT) to the company and assembly of the first-born in heaven enrolled, and to God the judge of all, and to spirits of righteous men made perfect,
Cross Reference Genesis 18:25 in Kannada 25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು
Exodus 4:22 in Kannada 22 ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.
Exodus 13:2 in Kannada 2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
Exodus 32:32 in Kannada 32 ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
Deuteronomy 21:17 in Kannada 17 ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.
Psalm 50:5 in Kannada 5 “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
Psalm 69:28 in Kannada 28 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
Psalm 89:7 in Kannada 7 ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
Psalm 89:27 in Kannada 27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
Psalm 94:2 in Kannada 2 ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.
Psalm 96:13 in Kannada 13 ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
Psalm 98:9 in Kannada 9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
Psalm 111:1 in Kannada 1 ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.
Ecclesiastes 12:7 in Kannada 7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
Jeremiah 31:9 in Kannada 9 ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
Matthew 25:31 in Kannada 31 “ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
Luke 10:20 in Kannada 20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.
John 5:27 in Kannada 27 ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.
Acts 20:28 in Kannada 28 ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನೇ ಆ ಗುಂಪಿನಲ್ಲಿ ಸಭಾಧ್ಯಕ್ಷರಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
1 Corinthians 13:12 in Kannada 12 ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
1 Corinthians 15:49 in Kannada 49 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
1 Corinthians 15:54 in Kannada 54 ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
2 Corinthians 5:8 in Kannada 8 ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.
Ephesians 1:22 in Kannada 22 ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.
Ephesians 5:24 in Kannada 24 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
Philippians 1:21 in Kannada 21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.
Philippians 3:12 in Kannada 12 ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.
Philippians 4:3 in Kannada 3 ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.
Colossians 1:12 in Kannada 12 ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
Colossians 1:24 in Kannada 24 ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
2 Thessalonians 1:5 in Kannada 5 ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.
1 Timothy 3:5 in Kannada 5 ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
Hebrews 6:10 in Kannada 10 ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
Hebrews 9:27 in Kannada 27 ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,
Hebrews 11:4 in Kannada 4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
Hebrews 11:40 in Kannada 40 ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.
James 1:18 in Kannada 18 ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
1 Peter 2:23 in Kannada 23 ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
Revelation 7:14 in Kannada 14 ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
Revelation 13:8 in Kannada 8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
Revelation 14:4 in Kannada 4 ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.
Revelation 20:15 in Kannada 15 ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.