Hebrews 12:25 in Kannada 25 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
Other Translations King James Version (KJV) See that ye refuse not him that speaketh. For if they escaped not who refused him that spake on earth, much more shall not we escape, if we turn away from him that speaketh from heaven:
American Standard Version (ASV) See that ye refuse not him that speaketh. For if they escaped not when they refused him that warned `them' on earth, much more `shall not' we `escape' who turn away from him that `warneth' from heaven:
Bible in Basic English (BBE) See that you give ear to his voice which comes to you. For if those whose ears were shut to the voice which came to them on earth did not go free from punishment, what chance have we of going free if we give no attention to him whose voice comes from heaven?
Darby English Bible (DBY) See that ye refuse not him that speaks. For if those did not escape who had refused him who uttered the oracles on earth, much more we who turn away from him [who does so] from heaven:
World English Bible (WEB) See that you don't refuse him who speaks. For if they didn't escape when they refused him who warned on the Earth, how much more will we not escape who turn away from him who warns from heaven,
Young's Literal Translation (YLT) See, may ye not refuse him who is speaking, for if those did not escape who refused him who upon earth was divinely speaking -- much less we who do turn away from him who `speaketh' from heaven,
Cross Reference Exodus 16:29 in Kannada 29 ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.
Exodus 20:22 in Kannada 22 ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
Numbers 32:15 in Kannada 15 ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.
Deuteronomy 30:17 in Kannada 17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
Joshua 22:16 in Kannada 16 “ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.
1 Kings 12:16 in Kannada 16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
2 Chronicles 7:19 in Kannada 19 ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,
Proverbs 1:24 in Kannada 24 ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
Proverbs 1:32 in Kannada 32 ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.
Proverbs 8:33 in Kannada 33 ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.
Proverbs 13:18 in Kannada 18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
Proverbs 15:32 in Kannada 32 ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
Isaiah 48:6 in Kannada 6 ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
Isaiah 64:9 in Kannada 9 ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
Jeremiah 11:10 in Kannada 10 ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪುಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
Ezekiel 5:6 in Kannada 6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”
Zechariah 7:11 in Kannada 11 “ನಿಮ್ಮ ಪಿತೃಗಳಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
Matthew 8:4 in Kannada 4 ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
Matthew 17:5 in Kannada 5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
Acts 7:35 in Kannada 35 “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
1 Thessalonians 5:15 in Kannada 15 ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
2 Timothy 4:4 in Kannada 4 ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
Hebrews 2:1 in Kannada 1 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
Hebrews 3:17 in Kannada 17 ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
Hebrews 8:5 in Kannada 5 ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
Hebrews 10:28 in Kannada 28 ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
Hebrews 11:7 in Kannada 7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
1 Peter 1:22 in Kannada 22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧೀಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
Revelation 19:10 in Kannada 10 ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.
Revelation 22:9 in Kannada 9 ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.