Hebrews 13:15 in Kannada 15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
Other Translations King James Version (KJV) By him therefore let us offer the sacrifice of praise to God continually, that is, the fruit of our lips giving thanks to his name.
American Standard Version (ASV) Through him then let us offer up a sacrifice of praise to God continually, that is, the fruit of lips which make confession to his name.
Bible in Basic English (BBE) Let us then make offerings of praise to God at all times through him, that is to say, the fruit of lips giving witness to his name.
Darby English Bible (DBY) By him therefore let us offer [the] sacrifice of praise continually to God, that is, [the] fruit of [the] lips confessing his name.
World English Bible (WEB) Through him, then, let us offer up a sacrifice of praise to God continually, that is, the fruit of lips which make confession to his name.
Young's Literal Translation (YLT) through him, then, we may offer up a sacrifice of praise always to God, that is, the fruit of lips, giving thanks to His name;
Cross Reference Genesis 4:3 in Kannada 3 ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
Leviticus 7:12 in Kannada 12 ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.
2 Chronicles 7:6 in Kannada 6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
2 Chronicles 29:31 in Kannada 31 ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
2 Chronicles 33:16 in Kannada 16 ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.
Ezra 3:11 in Kannada 11 ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.
Nehemiah 12:40 in Kannada 40 ದೇವಾಲಯದ ಎರಡು ಆರಾಧನಾಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ
Nehemiah 12:43 in Kannada 43 ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.
Psalm 18:49 in Kannada 49 ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.
Psalm 50:14 in Kannada 14 ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.
Psalm 50:23 in Kannada 23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
Psalm 69:30 in Kannada 30 ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
Psalm 107:21 in Kannada 21 ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
Psalm 116:17 in Kannada 17 ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
Psalm 118:19 in Kannada 19 ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
Psalm 136:1 in Kannada 1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
Psalm 145:1 in Kannada 1 ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
Isaiah 12:1 in Kannada 1 ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
Isaiah 57:19 in Kannada 19 ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.
Hosea 14:2 in Kannada 2 ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.
Matthew 11:25 in Kannada 25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಪಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಂಥವರಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
Luke 10:21 in Kannada 21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
John 10:9 in Kannada 9 ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
John 14:6 in Kannada 6 ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
Romans 6:19 in Kannada 19 ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
Romans 12:1 in Kannada 1 ಆದ್ದರಿಂದ ಪ್ರಿಯರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
Ephesians 2:18 in Kannada 18 ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.
Ephesians 5:19 in Kannada 19 ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
Colossians 1:12 in Kannada 12 ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
Colossians 3:16 in Kannada 16 ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮಿಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
Hebrews 7:25 in Kannada 25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
1 Peter 2:5 in Kannada 5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
1 Peter 4:11 in Kannada 11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.
Revelation 4:8 in Kannada 8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.
Revelation 5:9 in Kannada 9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
Revelation 7:9 in Kannada 9 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.
Revelation 19:1 in Kannada 1 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.