Hebrews 13:17 in Kannada 17 ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
Other Translations King James Version (KJV) Obey them that have the rule over you, and submit yourselves: for they watch for your souls, as they that must give account, that they may do it with joy, and not with grief: for that is unprofitable for you.
American Standard Version (ASV) Obey them that have the rule over you, and submit `to them': for they watch in behalf of your souls, as they that shall give account; that they may do this with joy, and not with grief: for this `were' unprofitable for you.
Bible in Basic English (BBE) Give ear to those who are rulers over you, and do as they say: for they keep watch over your souls, ready to give an account of them; let them be able to do this with joy and not with grief, because that would be of no profit to you.
Darby English Bible (DBY) Obey your leaders, and be submissive; for *they* watch over your souls as those that shall give account; that they may do this with joy, and not groaning, for this [would be] unprofitable for you.
World English Bible (WEB) Obey your leaders and submit to them, for they watch on behalf of your souls, as those who will give account, that they may do this with joy, and not with groaning, for that would be unprofitable for you.
Young's Literal Translation (YLT) Be obedient to those leading you, and be subject, for these do watch for your souls, as about to give account, that with joy they may do this, and not sighing, for this `is' unprofitable to you.
Cross Reference Genesis 16:9 in Kannada 9 ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.
Exodus 32:31 in Kannada 31 ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
1 Samuel 8:19 in Kannada 19 ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;
1 Samuel 15:19 in Kannada 19 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.
Proverbs 5:13 in Kannada 13 ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
Isaiah 62:6 in Kannada 6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,
Jeremiah 13:17 in Kannada 17 ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
Ezekiel 3:17 in Kannada 17 “ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.
Ezekiel 33:2 in Kannada 2 “ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿ ಕೊಳ್ಳಲಿ.
Ezekiel 33:7 in Kannada 7 “ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
Luke 16:2 in Kannada 2 ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.
Acts 20:24 in Kannada 24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
Acts 20:28 in Kannada 28 ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನೇ ಆ ಗುಂಪಿನಲ್ಲಿ ಸಭಾಧ್ಯಕ್ಷರಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
Romans 14:12 in Kannada 12 ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
1 Corinthians 4:1 in Kannada 1 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮವಾದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಗೃಹ ನಿರ್ವಾಹಕರೆಂತಲೂ ಎಣಿಸಿಕೊಳ್ಳಲಿ.
1 Corinthians 16:16 in Kannada 16 ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.
2 Corinthians 5:10 in Kannada 10 ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
Ephesians 5:21 in Kannada 21 ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
Philippians 2:12 in Kannada 12 ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
Philippians 2:16 in Kannada 16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
Philippians 2:29 in Kannada 29 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.
Philippians 3:18 in Kannada 18 ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
Philippians 4:1 in Kannada 1 ಹೀಗಿರಲಾಗಿ, ನನ್ನ ಪ್ರಿಯರೇ ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.
1 Thessalonians 2:19 in Kannada 19 ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.
1 Thessalonians 3:9 in Kannada 9 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?
1 Thessalonians 5:12 in Kannada 12 ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
2 Thessalonians 3:14 in Kannada 14 ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
1 Timothy 5:17 in Kannada 17 ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
Hebrews 13:7 in Kannada 7 ನಿಮಗೆ ದೇವರ ವಾಕ್ಯವನ್ನು ಬೋಧಿಸಿ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
Hebrews 13:24 in Kannada 24 ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.
James 4:7 in Kannada 7 ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
1 Peter 5:2 in Kannada 2 ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
1 Peter 5:5 in Kannada 5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”