Hebrews 13:20 in Kannada 20 ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
Other Translations King James Version (KJV) Now the God of peace, that brought again from the dead our Lord Jesus, that great shepherd of the sheep, through the blood of the everlasting covenant,
American Standard Version (ASV) Now the God of peace, who brought again from the dead the great shepherd of the sheep with the blood of an eternal covenant, `even' our Lord Jesus,
Bible in Basic English (BBE) Now may the God of peace, who made that great keeper of his flock, even our Lord Jesus, come back from the dead through the blood of the eternal agreement,
Darby English Bible (DBY) But the God of peace, who brought again from among [the] dead our Lord Jesus, the great shepherd of the sheep, in [the power of the] blood of [the] eternal covenant,
World English Bible (WEB) Now may the God of peace, who brought again from the dead the great shepherd of the sheep with the blood of an eternal covenant, our Lord Jesus,
Young's Literal Translation (YLT) And the God of the peace, who did bring up out of the dead the great shepherd of the sheep -- in the blood of an age-during covenant -- our Lord Jesus,
Cross Reference Exodus 24:8 in Kannada 8 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.
2 Samuel 23:5 in Kannada 5 ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
1 Chronicles 16:17 in Kannada 17 ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.
Psalm 23:1 in Kannada 1 ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು.
Psalm 80:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ. ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
Isaiah 40:11 in Kannada 11 ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
Isaiah 55:3 in Kannada 3 ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
Isaiah 61:8 in Kannada 8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
Isaiah 63:11 in Kannada 11 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
Jeremiah 32:40 in Kannada 40 ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
Ezekiel 34:23 in Kannada 23 “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
Ezekiel 37:24 in Kannada 24 “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
Ezekiel 37:26 in Kannada 26 ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
Zechariah 9:11 in Kannada 11 ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.
Matthew 26:28 in Kannada 28 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸಒಡಂಬಡಿಕೆಯ ರಕ್ತ.
Mark 14:24 in Kannada 24 ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.
Luke 22:20 in Kannada 20 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
John 10:11 in Kannada 11 “ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
John 10:14 in Kannada 14 ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.
Acts 2:24 in Kannada 24 ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
Acts 2:32 in Kannada 32 ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
Acts 3:15 in Kannada 15 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
Acts 4:10 in Kannada 10 ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
Acts 5:30 in Kannada 30 ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
Acts 10:40 in Kannada 40 ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.
Acts 13:30 in Kannada 30 “ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
Acts 17:31 in Kannada 31 ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
Romans 1:4 in Kannada 4 ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ಈ ವಾಗ್ದನಮಾಡಿದ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.
Romans 4:24 in Kannada 24 ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
Romans 8:11 in Kannada 11 ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
Romans 15:33 in Kannada 33 ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
Romans 16:20 in Kannada 20 ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
1 Corinthians 6:14 in Kannada 14 ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.
1 Corinthians 14:33 in Kannada 33 ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.
1 Corinthians 15:15 in Kannada 15 ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.
2 Corinthians 4:14 in Kannada 14 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
2 Corinthians 13:11 in Kannada 11 ಕಡೆಯದಾಗಿ ಪ್ರಿಯರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
Galatians 1:1 in Kannada 1 ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
Ephesians 1:20 in Kannada 20 ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
Philippians 4:9 in Kannada 9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
Colossians 2:12 in Kannada 12 ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.
1 Thessalonians 1:10 in Kannada 10 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
1 Thessalonians 5:23 in Kannada 23 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
2 Thessalonians 3:16 in Kannada 16 ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
Hebrews 9:16 in Kannada 16 ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.
Hebrews 9:20 in Kannada 20 “ಇದು ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು.
Hebrews 10:22 in Kannada 22 ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧಿಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
Hebrews 10:29 in Kannada 29 ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
1 Peter 1:21 in Kannada 21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
1 Peter 2:25 in Kannada 25 ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
1 Peter 5:4 in Kannada 4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.