Hebrews 13:4 in Kannada 4 ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
Other Translations King James Version (KJV) Marriage is honourable in all, and the bed undefiled: but whoremongers and adulterers God will judge.
American Standard Version (ASV) `Let' marriage `be' had in honor among all, and `let' the bed `be' undefiled: for fornicators and adulterers God will judge.
Bible in Basic English (BBE) Let married life be honoured among all of you and not made unclean; for men untrue in married life will be judged by God.
Darby English Bible (DBY) [Let] marriage [be held] every way in honour, and the bed [be] undefiled; for fornicators and adulterers will God judge.
World English Bible (WEB) Let marriage be held in honor among all, and let the bed be undefiled: but God will judge the sexually immoral and adulterers.
Young's Literal Translation (YLT) honourable `is' the marriage in all, and the bed undefiled, and whoremongers and adulterers God shall judge.
Cross Reference Genesis 1:27 in Kannada 27 ಹೀಗೆ ದೇವರು; ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.
Genesis 2:21 in Kannada 21 ಹೀಗಿರುವಲ್ಲಿ ಯೆಹೋವ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
Genesis 2:24 in Kannada 24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
Leviticus 21:13 in Kannada 13 ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
2 Kings 22:14 in Kannada 14 ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.
Psalm 50:16 in Kannada 16 ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
Proverbs 5:15 in Kannada 15 ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
Isaiah 8:3 in Kannada 3 ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.
Malachi 3:5 in Kannada 5 “ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಬಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
1 Corinthians 5:13 in Kannada 13 ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”
1 Corinthians 6:9 in Kannada 9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
1 Corinthians 7:2 in Kannada 2 ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
1 Corinthians 7:38 in Kannada 38 ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ.
1 Corinthians 9:5 in Kannada 5 ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?
2 Corinthians 5:10 in Kannada 10 ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
Galatians 5:19 in Kannada 19 ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
Galatians 5:21 in Kannada 21 ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
Ephesians 5:5 in Kannada 5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
Colossians 3:5 in Kannada 5 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
1 Timothy 3:2 in Kannada 2 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
1 Timothy 3:4 in Kannada 4 ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
1 Timothy 3:12 in Kannada 12 ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
1 Timothy 4:3 in Kannada 3 ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂದತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.
1 Timothy 5:14 in Kannada 14 ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
Titus 1:6 in Kannada 6 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.
Hebrews 12:16 in Kannada 16 ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
Revelation 22:15 in Kannada 15 ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.