Hebrews 13:5 in Kannada 5 ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
Other Translations King James Version (KJV) Let your conversation be without covetousness; and be content with such things as ye have: for he hath said, I will never leave thee, nor forsake thee.
American Standard Version (ASV) Be ye free from the love of money; content with such things as ye have: for himself hath said, I will in no wise fail thee, neither will I in any wise forsake thee.
Bible in Basic English (BBE) Be free from the love of money and pleased with the things which you have; for he himself has said, I will be with you at all times.
Darby English Bible (DBY) [Let your] conversation [be] without love of money, satisfied with [your] present circumstances; for *he* has said, I will not leave thee, neither will I forsake thee.
World English Bible (WEB) Be free from the love of money, content with such things as you have, for he has said, "I will in no way leave you, neither will I in any way forsake you."
Young's Literal Translation (YLT) Without covetousness the behaviour, being content with the things present, for He hath said, `No, I will not leave, no, nor forsake thee,'
Cross Reference Genesis 28:15 in Kannada 15 ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.
Exodus 2:21 in Kannada 21 ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.
Exodus 20:17 in Kannada 17 “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
Deuteronomy 31:6 in Kannada 6 ನೀವು ಶೂರರಾಗಿ ಧೈರ್ಯದಿಂದ ಇರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
Deuteronomy 31:8 in Kannada 8 ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
Joshua 1:5 in Kannada 5 ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.
1 Samuel 12:22 in Kannada 22 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.
1 Chronicles 28:20 in Kannada 20 ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
Psalm 10:3 in Kannada 3 ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.
Psalm 37:25 in Kannada 25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
Psalm 37:28 in Kannada 28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
Psalm 119:36 in Kannada 36 ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.
Isaiah 41:10 in Kannada 10 ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಕೊಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
Isaiah 41:17 in Kannada 17 ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
Jeremiah 6:13 in Kannada 13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
Ezekiel 33:31 in Kannada 31 ಶ್ರದ್ದೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
Matthew 6:25 in Kannada 25 “ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.
Matthew 6:34 in Kannada 34 ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
Mark 7:22 in Kannada 22 ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
Luke 3:14 in Kannada 14 ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.
Luke 8:14 in Kannada 14 ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
Luke 12:15 in Kannada 15 ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
Luke 16:13 in Kannada 13 ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
Romans 1:29 in Kannada 29 ಹೇಗಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
1 Corinthians 5:11 in Kannada 11 ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
1 Corinthians 6:10 in Kannada 10 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
Ephesians 5:3 in Kannada 3 ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
Ephesians 5:5 in Kannada 5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
Philippians 4:11 in Kannada 11 ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
Colossians 3:5 in Kannada 5 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
1 Timothy 3:3 in Kannada 3 ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
1 Timothy 6:6 in Kannada 6 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
2 Peter 2:3 in Kannada 3 ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
2 Peter 2:14 in Kannada 14 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
Jude 1:11 in Kannada 11 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.