Hebrews 13:7 in Kannada 7 ನಿಮಗೆ ದೇವರ ವಾಕ್ಯವನ್ನು ಬೋಧಿಸಿ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
Other Translations King James Version (KJV) Remember them which have the rule over you, who have spoken unto you the word of God: whose faith follow, considering the end of their conversation.
American Standard Version (ASV) Remember them that had the rule over you, men that spake unto you the word of God; and considering the issue of their life, imitate their faith.
Bible in Basic English (BBE) Keep in mind those who were over you, and who gave you the word of God; seeing the outcome of their way of life, let your faith be like theirs.
Darby English Bible (DBY) Remember your leaders who have spoken to you the word of God; and considering the issue of their conversation, imitate their faith.
World English Bible (WEB) Remember your leaders, men who spoke to you the word of God, and considering the results of their conduct, imitate their faith.
Young's Literal Translation (YLT) Be mindful of those leading you, who did speak to you the word of God, whose faith -- considering the issue of the behaviour -- be imitating,
Cross Reference Song of Solomon 1:8 in Kannada 8 ಸ್ರ್ತೀಯರಲ್ಲಿ ಅತೀ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
Matthew 24:45 in Kannada 45 ಅಂದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
Luke 8:11 in Kannada 11 ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
Luke 12:42 in Kannada 42 ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
Acts 4:31 in Kannada 31 ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
Acts 7:55 in Kannada 55 ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೇನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;
Acts 13:46 in Kannada 46 ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
Acts 14:23 in Kannada 23 ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
Romans 10:17 in Kannada 17 ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
1 Corinthians 4:16 in Kannada 16 ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 Corinthians 10:13 in Kannada 13 ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
1 Corinthians 11:1 in Kannada 1 ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.
Philippians 3:17 in Kannada 17 ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
1 Thessalonians 1:6 in Kannada 6 ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
1 Thessalonians 2:13 in Kannada 13 ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.
1 Thessalonians 5:12 in Kannada 12 ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
2 Thessalonians 3:7 in Kannada 7 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
2 Thessalonians 3:9 in Kannada 9 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
1 Timothy 3:5 in Kannada 5 ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
Hebrews 6:12 in Kannada 12 ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
Hebrews 13:17 in Kannada 17 ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
Hebrews 13:24 in Kannada 24 ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.
Revelation 1:9 in Kannada 9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.
Revelation 6:9 in Kannada 9 ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.
Revelation 20:4 in Kannada 4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.