Hebrews 13:9 in Kannada 9 ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
Other Translations King James Version (KJV) Be not carried about with divers and strange doctrines. For it is a good thing that the heart be established with grace; not with meats, which have not profited them that have been occupied therein.
American Standard Version (ASV) Be not carried away by divers and strange teachings: for it is good that the heart be established by grace; not by meats, wherein they that occupied themselves were not profited.
Bible in Basic English (BBE) Do not be turned away by different strange teachings, because it is good for your hearts to be made strong by grace, and not by meats, which were of no profit to those who took so much trouble over them.
Darby English Bible (DBY) Be not carried away with various and strange doctrines; for [it is] good that the heart be confirmed with grace, not meats; those who have walked in which have not been profited by [them].
World English Bible (WEB) Don't be carried away by various and strange teachings, for it is good that the heart be established by grace, not by food, through which those who were so occupied were not benefited.
Young's Literal Translation (YLT) with teachings manifold and strange be not carried about, for `it is' good that by grace the heart be confirmed, not with meats, in which they who were occupied were not profited;
Cross Reference Leviticus 11:1 in Kannada 1 ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
Deuteronomy 14:3 in Kannada 3 ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು.
Matthew 24:4 in Kannada 4 ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.
Matthew 24:24 in Kannada 24 ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
Acts 10:14 in Kannada 14 ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.
Acts 20:30 in Kannada 30 ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
Acts 20:32 in Kannada 32 ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
Romans 14:2 in Kannada 2 ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.
Romans 14:6 in Kannada 6 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
Romans 14:17 in Kannada 17 ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
Romans 16:17 in Kannada 17 ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 Corinthians 6:13 in Kannada 13 “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹ ಕೊಸಕರ ಇದ್ದಾನೆ.
1 Corinthians 8:8 in Kannada 8 ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
2 Corinthians 1:21 in Kannada 21 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.
2 Corinthians 11:11 in Kannada 11 ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.
Galatians 1:6 in Kannada 6 ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
Galatians 6:1 in Kannada 1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
Ephesians 4:14 in Kannada 14 ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
Ephesians 5:6 in Kannada 6 ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
Colossians 2:4 in Kannada 4 ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.
Colossians 2:7 in Kannada 7 ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
Colossians 2:16 in Kannada 16 ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.
2 Thessalonians 2:2 in Kannada 2 ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
2 Thessalonians 2:17 in Kannada 17 ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.
1 Timothy 4:1 in Kannada 1 ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
1 Timothy 6:3 in Kannada 3 ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,
1 Timothy 6:20 in Kannada 20 ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.
2 Timothy 2:1 in Kannada 1 ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.
Titus 1:14 in Kannada 14 ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.
Hebrews 9:9 in Kannada 9 ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
1 John 4:1 in Kannada 1 ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
Jude 1:3 in Kannada 3 ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
Jude 1:12 in Kannada 12 ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.