Hebrews 2:10 in Kannada 10 ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
Other Translations King James Version (KJV) For it became him, for whom are all things, and by whom are all things, in bringing many sons unto glory, to make the captain of their salvation perfect through sufferings.
American Standard Version (ASV) For it became him, for whom are all things, and through whom are all things, in bringing many sons unto glory, to make the author of their salvation perfect through sufferings.
Bible in Basic English (BBE) Because it was right for him, for whom and through whom all things have being, in guiding his sons to glory, to make the captain of their salvation complete through pain.
Darby English Bible (DBY) For it became him, for whom [are] all things, and by whom [are] all things, in bringing many sons to glory, to make perfect the leader of their salvation through sufferings.
World English Bible (WEB) For it became him, for whom are all things, and through whom are all things, in bringing many children to glory, to make the author of their salvation perfect through sufferings.
Young's Literal Translation (YLT) For it was becoming to Him, because of whom `are' the all things, and through whom `are' the all things, many sons to glory bringing, the author of their salvation through sufferings to make perfect,
Cross Reference Genesis 18:25 in Kannada 25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು
Joshua 5:14 in Kannada 14 ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು
Proverbs 16:4 in Kannada 4 ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.
Isaiah 43:21 in Kannada 21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.
Isaiah 55:4 in Kannada 4 ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
Hosea 8:10 in Kannada 10 ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.
Micah 2:13 in Kannada 13 ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.
Luke 13:32 in Kannada 32 ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
Luke 24:26 in Kannada 26 ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.
Luke 24:46 in Kannada 46 ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,
John 11:52 in Kannada 52 ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುವುದಾಗಿ ಪ್ರವಾದಿಸಿದನು
John 19:30 in Kannada 30 ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.
Acts 3:15 in Kannada 15 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
Acts 5:31 in Kannada 31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
Romans 3:25 in Kannada 25 ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
Romans 8:14 in Kannada 14 ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.
Romans 8:29 in Kannada 29 ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
Romans 9:23 in Kannada 23 ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
Romans 9:25 in Kannada 25 ಆ ವಚನವೇನಂದರೆ- “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
Romans 11:36 in Kannada 36 ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.
1 Corinthians 2:7 in Kannada 7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.
1 Corinthians 8:6 in Kannada 6 “ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”
2 Corinthians 3:18 in Kannada 18 ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
2 Corinthians 4:17 in Kannada 17 ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.
2 Corinthians 5:18 in Kannada 18 ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;
2 Corinthians 6:18 in Kannada 18 ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
Galatians 3:26 in Kannada 26 ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
Ephesians 1:5 in Kannada 5 ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ದತ್ತು ತೆಗೆದುಕೊಳ್ಳಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.
Ephesians 2:7 in Kannada 7 ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.
Ephesians 3:10 in Kannada 10 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
Colossians 1:16 in Kannada 16 ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.
Colossians 3:4 in Kannada 4 ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
2 Timothy 2:10 in Kannada 10 ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.
Hebrews 5:8 in Kannada 8 ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
Hebrews 6:20 in Kannada 20 ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನಿಧ್ಯವನ್ನು ಪ್ರವೇಶಿಸಿದ್ದಾನೆ.
Hebrews 7:26 in Kannada 26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
Hebrews 7:28 in Kannada 28 ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.
1 Peter 1:12 in Kannada 12 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
1 Peter 5:1 in Kannada 1 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
1 Peter 5:10 in Kannada 10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
1 John 3:1 in Kannada 1 ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಲಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
Revelation 7:9 in Kannada 9 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.