Hebrews 2:14 in Kannada 14 ಇದಲ್ಲದೆ ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
Other Translations King James Version (KJV) Forasmuch then as the children are partakers of flesh and blood, he also himself likewise took part of the same; that through death he might destroy him that had the power of death, that is, the devil;
American Standard Version (ASV) Since then the children are sharers in flesh and blood, he also himself in like manner partook of the same; that through death he might bring to nought him that had the power of death, that is, the devil;
Bible in Basic English (BBE) And because the children are flesh and blood, he took a body himself and became like them; so that by his death he might put an end to him who had the power of death, that is to say, the Evil One;
Darby English Bible (DBY) Since therefore the children partake of blood and flesh, he also, in like manner, took part in the same, that through death he might annul him who has the might of death, that is, the devil;
World English Bible (WEB) Since then the children have shared in flesh and blood, he also himself in like manner partook of the same, that through death he might bring to nothing him who had the power of death, that is, the devil,
Young's Literal Translation (YLT) Seeing, then, the children have partaken of flesh and blood, he himself also in like manner did take part of the same, that through death he might destroy him having the power of death -- that is, the devil --
Cross Reference Genesis 3:15 in Kannada 15 ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
Isaiah 7:14 in Kannada 14 ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
Isaiah 25:8 in Kannada 8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
Isaiah 53:12 in Kannada 12 ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
Hosea 13:14 in Kannada 14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.
Matthew 25:41 in Kannada 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
John 1:14 in Kannada 14 ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
John 12:24 in Kannada 24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
John 12:31 in Kannada 31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
Romans 8:3 in Kannada 3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
Romans 14:9 in Kannada 9 ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
1 Corinthians 15:50 in Kannada 50 ಪ್ರಿಯರೇ, ನಾನು ಹೇಳುವುದೇನಂದರೆ, ರಕ್ತಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
1 Corinthians 15:54 in Kannada 54 ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
Galatians 4:4 in Kannada 4 ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
Philippians 2:7 in Kannada 7 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
Colossians 2:15 in Kannada 15 ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವರನ್ನು ಜಯಿಸಿ ಬಹಿರಂಗಪಡಿಸಿದನು.
1 Timothy 3:16 in Kannada 16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ- ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
2 Timothy 1:10 in Kannada 10 ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.
Hebrews 2:18 in Kannada 18 ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
Hebrews 4:15 in Kannada 15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
Hebrews 9:15 in Kannada 15 ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
1 John 3:8 in Kannada 8 ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
Revelation 1:18 in Kannada 18 ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.
Revelation 2:10 in Kannada 10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
Revelation 12:9 in Kannada 9 ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
Revelation 20:2 in Kannada 2 ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.