Hebrews 2:3 in Kannada 3 ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
Other Translations King James Version (KJV) How shall we escape, if we neglect so great salvation; which at the first began to be spoken by the Lord, and was confirmed unto us by them that heard him;
American Standard Version (ASV) how shall we escape, if we neglect so great a salvation? which having at the first been spoken through the Lord, was confirmed unto us by them that heard;
Bible in Basic English (BBE) What will come on us, if we do not give our minds to such a great salvation? a salvation of which our fathers first had knowledge through the words of the Lord, and which was made certain to us by those to whom his words came;
Darby English Bible (DBY) how shall *we* escape if we have been negligent of so great salvation, which, having had its commencement in being spoken [of] by the Lord, has been confirmed to us by those who have heard;
World English Bible (WEB) how will we escape if we neglect so great a salvation-- which at the first having been spoken through the Lord, was confirmed to us by those who heard;
Young's Literal Translation (YLT) how shall we escape, having neglected so great salvation? which a beginning receiving -- to be spoken through the Lord -- by those having heard was confirmed to us,
Cross Reference Isaiah 12:2 in Kannada 2 ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
Isaiah 20:6 in Kannada 6 ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಯೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.
Isaiah 51:5 in Kannada 5 ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
Isaiah 51:8 in Kannada 8 ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳುವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”
Isaiah 62:11 in Kannada 11 “ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.
Ezekiel 17:15 in Kannada 15 ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”
Ezekiel 17:18 in Kannada 18 ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಅಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”
Matthew 4:17 in Kannada 17 ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
Matthew 23:33 in Kannada 33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
Mark 1:14 in Kannada 14 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
Mark 16:15 in Kannada 15 ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
Luke 1:2 in Kannada 2 ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,
Luke 1:69 in Kannada 69 ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
Luke 24:19 in Kannada 19 ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
Luke 24:47 in Kannada 47 ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
John 3:16 in Kannada 16 “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
John 15:27 in Kannada 27 ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.
Acts 2:22 in Kannada 22 “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
Acts 4:12 in Kannada 12 ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
Acts 10:40 in Kannada 40 ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.
Romans 2:3 in Kannada 3 ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
1 Thessalonians 5:3 in Kannada 3 “ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
1 Timothy 1:15 in Kannada 15 ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.
Titus 2:11 in Kannada 11 ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
Hebrews 1:2 in Kannada 2 ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.
Hebrews 4:1 in Kannada 1 ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
Hebrews 4:11 in Kannada 11 ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
Hebrews 5:9 in Kannada 9 ಇದಲ್ಲದೆ ಆತನು ಪರಿಪೂರ್ಣಗೊಳಿಸಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
Hebrews 7:25 in Kannada 25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
Hebrews 10:28 in Kannada 28 ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
Hebrews 12:25 in Kannada 25 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
1 Peter 4:17 in Kannada 17 ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
Revelation 6:16 in Kannada 16 ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.
Revelation 7:10 in Kannada 10 ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.