Hebrews 2:9 in Kannada 9 ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.
Other Translations King James Version (KJV) But we see Jesus, who was made a little lower than the angels for the suffering of death, crowned with glory and honour; that he by the grace of God should taste death for every man.
American Standard Version (ASV) But we behold him who hath been made a little lower than the angels, `even' Jesus, because of the suffering of death crowned with glory and honor, that by the grace of God he should taste of death for every `man'.
Bible in Basic English (BBE) But we see him who was made a little lower than the angels, even Jesus, crowned with glory and honour, because he let himself be put to death so that by the grace of God he might undergo death for all men.
Darby English Bible (DBY) but we see Jesus, who [was] made some little inferior to angels on account of the suffering of death, crowned with glory and honour; so that by the grace of God he should taste death for every thing.
World English Bible (WEB) But we see him who has been made a little lower than the angels, Jesus, because of the suffering of death crowned with glory and honor, that by the grace of God he should taste of death for everyone.
Young's Literal Translation (YLT) and him who was made some little less than messengers we see -- Jesus -- because of the suffering of the death, with glory and honour having been crowned, that by the grace of God for every one he might taste of death.
Cross Reference Genesis 3:15 in Kannada 15 ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
Psalm 21:3 in Kannada 3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
Isaiah 7:14 in Kannada 14 ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
Isaiah 11:1 in Kannada 1 ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
Isaiah 53:2 in Kannada 2 ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
Matthew 6:28 in Kannada 28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;
Matthew 16:28 in Kannada 28 “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
Mark 9:1 in Kannada 1 ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
Luke 9:27 in Kannada 27 ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
John 1:29 in Kannada 29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
John 3:16 in Kannada 16 “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
John 8:52 in Kannada 52 ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?
John 10:17 in Kannada 17 ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.
John 12:32 in Kannada 32 ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
Acts 2:33 in Kannada 33 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
Acts 3:13 in Kannada 13 ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
Romans 5:8 in Kannada 8 ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
Romans 5:18 in Kannada 18 ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.
Romans 8:3 in Kannada 3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
Romans 8:32 in Kannada 32 ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
2 Corinthians 5:15 in Kannada 15 ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು. ಅವನು ಎಲ್ಲರಿಗಾಗಿ ಜೀವತೆತ್ತಿದ್ದಾನೆಂದು ನಾವು ನಿರ್ಣಯಿಸಿದ್ದೇವೆ.
2 Corinthians 5:21 in Kannada 21 ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
Galatians 4:4 in Kannada 4 ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
Philippians 2:7 in Kannada 7 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
1 Timothy 2:6 in Kannada 6 ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
Hebrews 2:7 in Kannada 7 ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
Hebrews 7:25 in Kannada 25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
Hebrews 8:3 in Kannada 3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.
Hebrews 10:5 in Kannada 5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “ದೇವರೇ, ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
1 Peter 1:21 in Kannada 21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
1 John 2:2 in Kannada 2 ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
1 John 4:9 in Kannada 9 ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.
Revelation 5:9 in Kannada 9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
Revelation 19:12 in Kannada 12 ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.