Hebrews 3:6 in Kannada 6 ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
Other Translations King James Version (KJV) But Christ as a son over his own house; whose house are we, if we hold fast the confidence and the rejoicing of the hope firm unto the end.
American Standard Version (ASV) but Christ as a son, over his house; whose house are we, if we hold fast our boldness and the glorying of our hope firm unto the end.
Bible in Basic English (BBE) But Christ as a son, over his house; whose house are we, if we keep our hearts fixed in the glad and certain hope till the end.
Darby English Bible (DBY) but Christ, as Son over his house, whose house are *we*, if indeed we hold fast the boldness and the boast of hope firm to the end.
World English Bible (WEB) but Christ is faithful as a Son over his house; whose house we are, if we hold fast our confidence and the glorying of our hope firm to the end.
Young's Literal Translation (YLT) and Christ, as a Son over his house, whose house are we, if the boldness and the rejoicing of the hope unto the end we hold fast.
Cross Reference Psalm 2:6 in Kannada 6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
Psalm 2:12 in Kannada 12 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನನ್ನು ಆಶ್ರಯಿಸುವವರೆಲ್ಲರು ಧನ್ಯರು.
Isaiah 9:6 in Kannada 6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
Matthew 10:22 in Kannada 22 ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
Matthew 16:18 in Kannada 18 ನಾನು ಇದನ್ನು ಸಹ ನಿನಗೆ ಹೇಳುತ್ತೇನ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
Matthew 24:13 in Kannada 13 ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
John 3:35 in Kannada 35 ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.
Romans 5:2 in Kannada 2 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
Romans 11:22 in Kannada 22 ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
Romans 12:12 in Kannada 12 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
Romans 15:13 in Kannada 13 ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
1 Corinthians 3:16 in Kannada 16 ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
1 Corinthians 6:19 in Kannada 19 ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
2 Corinthians 6:16 in Kannada 16 ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನನ್ನ ಜನರಲ್ಲೇ ನಾ ಮನೆಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
Galatians 6:9 in Kannada 9 ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
Ephesians 2:21 in Kannada 21 ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ದಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.
Colossians 1:23 in Kannada 23 ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ನೆಲೆಗೊಳ್ಳುವುದಾದರೆ, ನೀವು ಅಡಿಪಾಯವುಳ್ಳವರೂ ಮತ್ತು ಸ್ಥಿರತೆಯುಳ್ಳವರೂ ಆಗುವಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
1 Thessalonians 5:16 in Kannada 16 ಯಾವಾಗಲೂ ಸಂತೋಷಿಸಿರಿ,
2 Thessalonians 2:16 in Kannada 16 ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
1 Timothy 3:15 in Kannada 15 ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
Hebrews 1:2 in Kannada 2 ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.
Hebrews 3:2 in Kannada 2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
Hebrews 3:14 in Kannada 14 ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
Hebrews 4:11 in Kannada 11 ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
Hebrews 4:14 in Kannada 14 ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
Hebrews 6:11 in Kannada 11 ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
Hebrews 10:23 in Kannada 23 ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
Hebrews 10:35 in Kannada 35 ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
Hebrews 10:38 in Kannada 38 ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
1 Peter 1:3 in Kannada 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
1 Peter 1:8 in Kannada 8 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
1 Peter 2:5 in Kannada 5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
Revelation 2:18 in Kannada 18 “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,
Revelation 2:25 in Kannada 25 ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.
Revelation 3:11 in Kannada 11 ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.