Hebrews 4:13 in Kannada 13 ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
Other Translations King James Version (KJV) Neither is there any creature that is not manifest in his sight: but all things are naked and opened unto the eyes of him with whom we have to do.
American Standard Version (ASV) And there is no creature that is not manifest in his sight: but all things are naked and laid open before the eyes of him with whom we have to do.
Bible in Basic English (BBE) And there is nothing made which is not completely clear to him; there is nothing covered, but all things are open to the eyes of him with whom we have to do.
Darby English Bible (DBY) And there is not a creature unapparent before him; but all things [are] naked and laid bare to his eyes, with whom we have to do.
World English Bible (WEB) There is no creature that is hidden from his sight, but all things are naked and laid open before the eyes of him with whom we have to do.
Young's Literal Translation (YLT) and there is not a created thing not manifest before Him, but all things `are' naked and open to His eyes -- with whom is our reckoning.
Cross Reference 1 Samuel 16:7 in Kannada 7 ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
1 Chronicles 28:9 in Kannada 9 ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
2 Chronicles 6:30 in Kannada 30 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.
2 Chronicles 16:9 in Kannada 9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ದಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
Job 26:6 in Kannada 6 ಪಾತಾಳವು ಆತನ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.
Job 34:21 in Kannada 21 ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.
Job 38:17 in Kannada 17 ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?
Psalm 7:9 in Kannada 9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
Psalm 33:13 in Kannada 13 ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
Psalm 44:21 in Kannada 21 ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
Psalm 90:8 in Kannada 8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
Psalm 139:11 in Kannada 11 ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?
Proverbs 15:3 in Kannada 3 ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
Proverbs 15:11 in Kannada 11 ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.
Ecclesiastes 12:14 in Kannada 14 ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
Jeremiah 17:10 in Kannada 10 ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
Jeremiah 17:23 in Kannada 23 ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
Matthew 7:21 in Kannada 21 ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
Matthew 25:31 in Kannada 31 “ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
John 2:24 in Kannada 24 ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
John 5:22 in Kannada 22 ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.
John 21:17 in Kannada 17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
Acts 17:31 in Kannada 31 ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
Romans 2:16 in Kannada 16 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
Romans 14:9 in Kannada 9 ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
1 Corinthians 4:5 in Kannada 5 ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
2 Corinthians 5:10 in Kannada 10 ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
Revelation 2:23 in Kannada 23 ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
Revelation 20:11 in Kannada 11 ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.