Hebrews 5:7 in Kannada 7 ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
Other Translations King James Version (KJV) Who in the days of his flesh, when he had offered up prayers and supplications with strong crying and tears unto him that was able to save him from death, and was heard in that he feared;
American Standard Version (ASV) Who in the days of his flesh, having offered up prayers and supplications with strong crying and tears unto him that was able to save him from death, and having been heard for his godly fear,
Bible in Basic English (BBE) Who in the days of his flesh, having sent up prayers and requests with strong crying and weeping to him who was able to give him salvation from death, had his prayer answered because of his fear of God.
Darby English Bible (DBY) Who in the days of his flesh, having offered up both supplications and entreaties to him who was able to save him out of death, with strong crying and tears; (and having been heard because of his piety;)
World English Bible (WEB) He, in the days of his flesh, having offered up prayers and petitions with strong crying and tears to him who was able to save him from death, and having been heard for his godly fear,
Young's Literal Translation (YLT) who in the days of his flesh both prayers and supplications unto Him who was able to save him from death -- with strong crying and tears -- having offered up, and having been heard in respect to that which he feared,
Cross Reference Leviticus 2:2 in Kannada 2 ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
Leviticus 4:4 in Kannada 4 ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
Psalm 18:19 in Kannada 19 ಆತನು ನನ್ನನ್ನು ಬಿಡಿಸಿ ವಿಶಾಲಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.
Psalm 22:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
Psalm 22:24 in Kannada 24 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
Psalm 40:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
Psalm 69:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಪ್ರಾಣಾಪಾಯವಾಗುವಷ್ಟು ಜಲವು ಏರಿಬಂದಿದೆ.
Psalm 69:13 in Kannada 13 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
Psalm 88:1 in Kannada 1 ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ. ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.
Isaiah 49:8 in Kannada 8 ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.
Isaiah 53:3 in Kannada 3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
Isaiah 53:11 in Kannada 11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
Matthew 26:28 in Kannada 28 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸಒಡಂಬಡಿಕೆಯ ರಕ್ತ.
Matthew 26:52 in Kannada 52 ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,
Matthew 27:46 in Kannada 46 ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಎಂದು ಮಹಾ ಧ್ವನಿಯಿಂದ ಕೂಗಿದನು. ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ.”
Matthew 27:50 in Kannada 50 ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
Mark 14:32 in Kannada 32 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.
Mark 15:34 in Kannada 34 ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.
Mark 15:37 in Kannada 37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು.
Luke 22:41 in Kannada 41 ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,
Luke 23:46 in Kannada 46 ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
John 1:14 in Kannada 14 ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
John 11:35 in Kannada 35 ಯೇಸು ಕಣ್ಣೀರಿಟ್ಟನು.
John 11:42 in Kannada 42 ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
John 12:27 in Kannada 27 ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
John 17:1 in Kannada 1 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
John 17:4 in Kannada 4 ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆ ಪಡಿಸಿದ್ದೇನೆ.
Romans 8:3 in Kannada 3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
Galatians 4:4 in Kannada 4 ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
1 Timothy 3:16 in Kannada 16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ- ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
Hebrews 2:14 in Kannada 14 ಇದಲ್ಲದೆ ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
Hebrews 12:28 in Kannada 28 ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
Hebrews 13:20 in Kannada 20 ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
1 John 4:3 in Kannada 3 ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.
2 John 1:7 in Kannada 7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.