Hebrews 6:10 in Kannada 10 ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
Other Translations King James Version (KJV) For God is not unrighteous to forget your work and labour of love, which ye have shewed toward his name, in that ye have ministered to the saints, and do minister.
American Standard Version (ASV) for God is not unrighteous to forget your work and the love which ye showed toward his name, in that ye ministered unto the saints, and still do minister.
Bible in Basic English (BBE) For God is true, and will not put away from him the memory of your work and of your love for his name, in the help which you gave and still give to the saints.
Darby English Bible (DBY) For God [is] not unrighteous to forget your work, and the love which ye have shewn to his name, having ministered to the saints, and [still] ministering.
World English Bible (WEB) For God is not unrighteous, so as to forget your work and the labor of love which you showed toward his name, in that you served the saints, and still do serve them.
Young's Literal Translation (YLT) for God is not unrighteous to forget your work, and the labour of the love, that ye shewed to His name, having ministered to the saints and ministering;
Cross Reference Deuteronomy 32:4 in Kannada 4 ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
Nehemiah 5:19 in Kannada 19 ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.
Nehemiah 13:22 in Kannada 22 ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.
Nehemiah 13:31 in Kannada 31 ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.
Psalm 20:3 in Kannada 3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ
Proverbs 14:31 in Kannada 31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
Proverbs 19:17 in Kannada 17 ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
Jeremiah 2:2 in Kannada 2 “ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವ್ವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
Jeremiah 18:20 in Kannada 20 ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
Matthew 10:42 in Kannada 42 ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
Matthew 25:35 in Kannada 35 ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
Mark 9:41 in Kannada 41 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
John 13:20 in Kannada 20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
Acts 2:44 in Kannada 44 ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
Acts 4:34 in Kannada 34 ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
Acts 9:36 in Kannada 36 ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
Acts 10:4 in Kannada 4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
Acts 10:31 in Kannada 31 ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
Acts 11:29 in Kannada 29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
Romans 3:4 in Kannada 4 ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
Romans 12:13 in Kannada 13 ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
Romans 15:25 in Kannada 25 ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.
1 Corinthians 13:4 in Kannada 4 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚು ಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
1 Corinthians 16:1 in Kannada 1 ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.
2 Corinthians 8:1 in Kannada 1 ಪ್ರಿಯರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,
2 Corinthians 9:1 in Kannada 1 ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.
2 Corinthians 9:11 in Kannada 11 ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
Galatians 5:6 in Kannada 6 ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜವಾಗಿದೆ.
Galatians 5:13 in Kannada 13 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
Galatians 6:10 in Kannada 10 ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
Philippians 4:16 in Kannada 16 ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
Colossians 3:17 in Kannada 17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
2 Thessalonians 1:6 in Kannada 6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.
1 Timothy 6:18 in Kannada 18 ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.
2 Timothy 1:17 in Kannada 17 ರೋಮಾಪುರಕ್ಕೆ ಬಂದಕೂಡಲೆ ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು.
2 Timothy 4:8 in Kannada 8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
Philemon 1:5 in Kannada 5 ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪಾನೆ ಮಾಡುತ್ತೇನೆ.
Hebrews 13:16 in Kannada 16 ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
James 2:15 in Kannada 15 ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ಆ ದಿನದ ಆಹಾರವೂ ಅಗತ್ಯವಾಗಿರುವಾಗ,
1 John 1:9 in Kannada 9 ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
1 John 3:14 in Kannada 14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.