Hebrews 6:12 in Kannada 12 ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
Other Translations King James Version (KJV) That ye be not slothful, but followers of them who through faith and patience inherit the promises.
American Standard Version (ASV) that ye be not sluggish, but imitators of them who through faith and patience inherit the promises.
Bible in Basic English (BBE) So that you may not be slow in heart, but may take as your example those to whom God has given their heritage, because of their faith and their long waiting.
Darby English Bible (DBY) that ye be not sluggish, but imitators of those who through faith and patience have been inheritors of the promises.
World English Bible (WEB) that you won't be sluggish, but imitators of those who through faith and patience inherited the promises.
Young's Literal Translation (YLT) that ye may not become slothful, but followers of those who through faith and patient endurance are inheriting the promises.
Cross Reference Proverbs 12:24 in Kannada 24 ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
Proverbs 13:4 in Kannada 4 ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
Proverbs 15:19 in Kannada 19 ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
Proverbs 18:9 in Kannada 9 ಕೆಲಸಗಳ್ಳನು ಕೆಡುಕನಿಗೆ ತಮ್ಮ.
Proverbs 24:30 in Kannada 30 ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷೆಯ ತೋಟದ ಮೇಲೆಯೂ ಹಾದು ಹೋದೆನು.
Song of Solomon 1:8 in Kannada 8 ಸ್ರ್ತೀಯರಲ್ಲಿ ಅತೀ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
Jeremiah 6:16 in Kannada 16 ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
Matthew 22:32 in Kannada 32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
Matthew 25:26 in Kannada 26 ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
Luke 8:15 in Kannada 15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
Luke 16:22 in Kannada 22 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
Luke 20:37 in Kannada 37 ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
Romans 2:7 in Kannada 7 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
Romans 4:12 in Kannada 12 ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
Romans 8:25 in Kannada 25 ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
Romans 12:11 in Kannada 11 ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
2 Thessalonians 1:4 in Kannada 4 ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.
Hebrews 1:14 in Kannada 14 ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?
Hebrews 5:11 in Kannada 11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.
Hebrews 6:15 in Kannada 15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.
Hebrews 10:36 in Kannada 36 ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
Hebrews 11:8 in Kannada 8 ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
Hebrews 11:33 in Kannada 33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,
Hebrews 12:1 in Kannada 1 ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
Hebrews 13:7 in Kannada 7 ನಿಮಗೆ ದೇವರ ವಾಕ್ಯವನ್ನು ಬೋಧಿಸಿ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
James 1:3 in Kannada 3 ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
James 5:10 in Kannada 10 ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
1 Peter 3:5 in Kannada 5 ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.
2 Peter 1:10 in Kannada 10 ಆದ್ದರಿಂದ ಪ್ರಿಯರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
1 John 2:25 in Kannada 25 ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.
Revelation 13:10 in Kannada 10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.
Revelation 14:12 in Kannada 12 ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.