Hebrews 6:17 in Kannada 17 ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
Other Translations King James Version (KJV) Wherein God, willing more abundantly to shew unto the heirs of promise the immutability of his counsel, confirmed it by an oath:
American Standard Version (ASV) Wherein God, being minded to show more abundantly unto the heirs of the promise the immutability of his counsel, interposed with an oath;
Bible in Basic English (BBE) So that when it was God's desire to make it specially clear to those who by his word were to have the heritage, that his purpose was fixed, he made it more certain with an oath;
Darby English Bible (DBY) Wherein God, willing to shew more abundantly to the heirs of the promise the unchangeableness of his purpose, intervened by an oath,
World English Bible (WEB) In this way God, being determined to show more abundantly to the heirs of the promise the immutability of his counsel, interposed with an oath;
Young's Literal Translation (YLT) in which God, more abundantly willing to shew to the heirs of the promise the immutability of his counsel, did interpose by an oath,
Cross Reference Genesis 26:28 in Kannada 28 “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
Exodus 22:11 in Kannada 11 ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.
Job 23:13 in Kannada 13 ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.
Psalm 33:11 in Kannada 11 ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
Psalm 36:8 in Kannada 8 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
Psalm 110:4 in Kannada 4 “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
Proverbs 19:21 in Kannada 21 ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
Song of Solomon 5:1 in Kannada 1 ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.
Isaiah 14:24 in Kannada 24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
Isaiah 14:26 in Kannada 26 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
Isaiah 46:10 in Kannada 10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
Isaiah 54:9 in Kannada 9 “ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.
Isaiah 55:7 in Kannada 7 ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
Isaiah 55:11 in Kannada 11 ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
Jeremiah 33:20 in Kannada 20 “ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,
Jeremiah 33:25 in Kannada 25 ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,
Malachi 3:6 in Kannada 6 “ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”
John 10:10 in Kannada 10 ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
Romans 8:17 in Kannada 17 ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
Romans 11:29 in Kannada 29 ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
Galatians 3:29 in Kannada 29 ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
Hebrews 6:12 in Kannada 12 ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
Hebrews 6:16 in Kannada 16 ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.
Hebrews 6:18 in Kannada 18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
Hebrews 11:7 in Kannada 7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
Hebrews 11:9 in Kannada 9 ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.
James 1:17 in Kannada 17 ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
James 2:5 in Kannada 5 ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
1 Peter 1:3 in Kannada 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
1 Peter 3:7 in Kannada 7 ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.