Hebrews 6:18 in Kannada 18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
Other Translations King James Version (KJV) That by two immutable things, in which it was impossible for God to lie, we might have a strong consolation, who have fled for refuge to lay hold upon the hope set before us:
American Standard Version (ASV) that by two immutable things, in which it is impossible for God to lie, we may have a strong encouragement, who have fled for refuge to lay hold of the hope set before us:
Bible in Basic English (BBE) So that we, who have gone in flight from danger to the hope which has been put before us, may have a strong comfort in two unchanging things, in which it is not possible for God to be false;
Darby English Bible (DBY) that by two unchangeable things, in which [it was] impossible that God should lie, we might have a strong encouragement, who have fled for refuge to lay hold on the hope set before us,
World English Bible (WEB) that by two immutable things, in which it is impossible for God to lie, we may have a strong encouragement, who have fled for refuge to take hold of the hope set before us.
Young's Literal Translation (YLT) that through two immutable things, in which `it is' impossible for God to lie, a strong comfort we may have who did flee for refuge to lay hold on the hope set before `us',
Cross Reference Genesis 19:22 in Kannada 22 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
Numbers 23:19 in Kannada 19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರೆವೇರಿಸುವುದಿಲ್ಲವೋ?
Numbers 35:11 in Kannada 11 ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
Joshua 20:3 in Kannada 3 ನಿಮ್ಮಲ್ಲಿ ತಿಳಿಯದೆ ಅಕಸ್ಮಾತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.
1 Samuel 15:29 in Kannada 29 ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.
1 Kings 2:28 in Kannada 28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
Psalm 46:1 in Kannada 1 1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
Psalm 62:8 in Kannada 8 ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ
Psalm 110:4 in Kannada 4 “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
Proverbs 3:18 in Kannada 18 ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
Proverbs 4:13 in Kannada 13 ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
Isaiah 27:5 in Kannada 5 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.
Isaiah 32:1 in Kannada 1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
Isaiah 51:12 in Kannada 12 ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
Isaiah 56:4 in Kannada 4 ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ
Isaiah 64:7 in Kannada 7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
Isaiah 66:10 in Kannada 10 ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!
Zechariah 9:12 in Kannada 12 ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.
Matthew 3:7 in Kannada 7 ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
Matthew 24:35 in Kannada 35 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
Luke 2:25 in Kannada 25 ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
Romans 3:4 in Kannada 4 ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
Romans 3:25 in Kannada 25 ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
Romans 15:5 in Kannada 5 ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
2 Corinthians 1:5 in Kannada 5 ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.
2 Corinthians 5:18 in Kannada 18 ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;
Philippians 2:1 in Kannada 1 ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,
Colossians 1:5 in Kannada 5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
Colossians 1:23 in Kannada 23 ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ನೆಲೆಗೊಳ್ಳುವುದಾದರೆ, ನೀವು ಅಡಿಪಾಯವುಳ್ಳವರೂ ಮತ್ತು ಸ್ಥಿರತೆಯುಳ್ಳವರೂ ಆಗುವಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
Colossians 1:27 in Kannada 27 ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
1 Thessalonians 1:10 in Kannada 10 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
2 Thessalonians 2:16 in Kannada 16 ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
1 Timothy 1:1 in Kannada 1 ನಮ್ಮ ರಕ್ಷಕನಾದ ದೇವರಿಂದಲೂ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನಿಂದಲೂ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು
1 Timothy 6:12 in Kannada 12 ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
2 Timothy 2:13 in Kannada 13 ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”
Titus 1:2 in Kannada 2 ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
Hebrews 3:6 in Kannada 6 ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
Hebrews 3:11 in Kannada 11 ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”
Hebrews 7:21 in Kannada 21 ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.
Hebrews 11:7 in Kannada 7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
Hebrews 12:1 in Kannada 1 ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
1 John 1:10 in Kannada 10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.
1 John 5:10 in Kannada 10 ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.