Hebrews 7:25 in Kannada 25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
Other Translations King James Version (KJV) Wherefore he is able also to save them to the uttermost that come unto God by him, seeing he ever liveth to make intercession for them.
American Standard Version (ASV) Wherefore also he is able to save to the uttermost them that draw near unto God through him, seeing he ever liveth to make intercession for them.
Bible in Basic English (BBE) So that he is fully able to be the saviour of all who come to God through him, because he is ever living to make prayer to God for them.
Darby English Bible (DBY) Whence also he is able to save completely those who approach by him to God, always living to intercede for them.
World English Bible (WEB) Therefore he is also able to save to the uttermost those who draw near to God through him, seeing he ever lives to make intercession for them.
Young's Literal Translation (YLT) whence also he is able to save to the very end, those coming through him unto God -- ever living to make intercession for them.
Cross Reference Job 22:17 in Kannada 17 ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.
Job 23:3 in Kannada 3 ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು.
Psalm 68:31 in Kannada 31 ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.
Isaiah 45:22 in Kannada 22 ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
Isaiah 45:24 in Kannada 24 ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
Isaiah 53:12 in Kannada 12 ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
Isaiah 59:16 in Kannada 16 ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
Isaiah 63:1 in Kannada 1 ಆಹಾ, ರಕ್ತವರ್ಣದ ಉಡುಪನ್ನುಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
Jeremiah 3:22 in Kannada 22 “ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
Daniel 3:15 in Kannada 15 “ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
Daniel 3:17 in Kannada 17 ‘ಅರಸೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
Daniel 3:29 in Kannada 29 ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
Daniel 6:20 in Kannada 20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
Daniel 9:16 in Kannada 16 ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.
John 5:37 in Kannada 37 ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
John 10:29 in Kannada 29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.
John 14:6 in Kannada 6 ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
John 14:13 in Kannada 13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
John 14:16 in Kannada 16 ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.
John 16:23 in Kannada 23 ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
John 17:9 in Kannada 9 ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
Romans 5:2 in Kannada 2 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
Romans 8:34 in Kannada 34 ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
Ephesians 2:18 in Kannada 18 ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.
Ephesians 3:12 in Kannada 12 ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
Ephesians 3:20 in Kannada 20 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
Philippians 3:21 in Kannada 21 ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
1 Timothy 2:5 in Kannada 5 ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
2 Timothy 1:12 in Kannada 12 ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
Hebrews 2:18 in Kannada 18 ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
Hebrews 5:7 in Kannada 7 ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
Hebrews 7:8 in Kannada 8 ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.
Hebrews 7:19 in Kannada 19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
Hebrews 7:24 in Kannada 24 ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು.
Hebrews 9:24 in Kannada 24 ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
Hebrews 11:6 in Kannada 6 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
Hebrews 13:15 in Kannada 15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
1 John 2:1 in Kannada 1 ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
Jude 1:24 in Kannada 24 ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,
Revelation 8:3 in Kannada 3 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.