Hebrews 7:26 in Kannada 26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
Other Translations King James Version (KJV) For such an high priest became us, who is holy, harmless, undefiled, separate from sinners, and made higher than the heavens;
American Standard Version (ASV) For such a high priest became us, holy, guileless, undefiled, separated from sinners, and made higher than the heavens;
Bible in Basic English (BBE) It was right for us to have such a high priest, one who is holy and without evil, doing no wrong, having no part with sinners, and made higher than the heavens:
Darby English Bible (DBY) For such a high priest became us, holy, harmless, undefiled, separated from sinners, and become higher than the heavens:
World English Bible (WEB) For such a high priest was fitting for us: holy, guiltless, undefiled, separated from sinners, and made higher than the heavens;
Young's Literal Translation (YLT) For such a chief priest did become us -- kind, harmless, undefiled, separate from the sinners, and become higher than the heavens,
Cross Reference Exodus 28:36 in Kannada 36 ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.
Psalm 68:18 in Kannada 18 ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
Isaiah 53:9 in Kannada 9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
Matthew 27:18 in Kannada 18 ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.
Mark 16:19 in Kannada 19 ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
Luke 1:35 in Kannada 35 ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
Luke 23:22 in Kannada 22 ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
Luke 23:41 in Kannada 41 ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
Luke 23:47 in Kannada 47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
Luke 24:26 in Kannada 26 ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.
Luke 24:46 in Kannada 46 ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,
John 8:29 in Kannada 29 ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.
John 14:30 in Kannada 30 ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.
Acts 3:14 in Kannada 14 ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
Acts 4:27 in Kannada 27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
2 Corinthians 5:21 in Kannada 21 ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
Ephesians 1:20 in Kannada 20 ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
Ephesians 4:8 in Kannada 8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
Philippians 2:9 in Kannada 9 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
Hebrews 1:3 in Kannada 3 ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧೀಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Hebrews 2:10 in Kannada 10 ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
Hebrews 4:14 in Kannada 14 ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
Hebrews 7:11 in Kannada 11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
Hebrews 8:1 in Kannada 1 ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
Hebrews 9:14 in Kannada 14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
Hebrews 9:23 in Kannada 23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
Hebrews 10:11 in Kannada 11 ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
1 Peter 1:19 in Kannada 19 ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
1 Peter 2:22 in Kannada 22 ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
1 Peter 3:22 in Kannada 22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
1 John 2:2 in Kannada 2 ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
1 John 3:5 in Kannada 5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
Revelation 1:17 in Kannada 17 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,
Revelation 3:7 in Kannada 7 “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,