Hebrews 8:10 in Kannada 10 ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.
Other Translations King James Version (KJV) For this is the covenant that I will make with the house of Israel after those days, saith the Lord; I will put my laws into their mind, and write them in their hearts: and I will be to them a God, and they shall be to me a people:
American Standard Version (ASV) For this is the covenant that I will make with the house of Israel After those days, saith the Lord; I will put my laws into their mind, And on their heart also will I write them: And I will be to them a God, And they shall be to me a people:
Bible in Basic English (BBE) For this is the agreement which I will make with the people of Israel after those days: I will put my laws into their minds, writing them in their hearts: and I will be their God, and they will be my people:
Darby English Bible (DBY) Because this [is] the covenant that I will covenant to the house of Israel after those days, saith the Lord: Giving my laws into their mind, I will write them also upon their hearts; and I will be to them for God, and *they* shall be to me for people.
World English Bible (WEB) "For this is the covenant that I will make with the house of Israel. After those days," says the Lord; "I will put my laws into their mind, I will also write them on their heart. I will be to them a God, And they will be to me a people.
Young's Literal Translation (YLT) because this `is' the covenant that I will make with the house of Israel, after those days, saith the Lord, giving My laws into their mind, and upon their hearts I will write them, and I will be to them for a God, and they shall be to Me for a people;
Cross Reference Genesis 17:7 in Kannada 7 ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
Exodus 19:5 in Kannada 5 ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
Exodus 24:4 in Kannada 4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
Exodus 24:7 in Kannada 7 ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.
Exodus 34:1 in Kannada 1 ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
Exodus 34:27 in Kannada 27 ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
Deuteronomy 30:6 in Kannada 6 ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.
Song of Solomon 2:16 in Kannada 16 ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
Jeremiah 24:7 in Kannada 7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.
Jeremiah 31:1 in Kannada 1 ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.
Jeremiah 31:33 in Kannada 33 ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೊವನು ಹೇಳುತ್ತಾನೆ.
Jeremiah 32:38 in Kannada 38 ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Jeremiah 32:40 in Kannada 40 ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
Ezekiel 11:19 in Kannada 19 “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.
Ezekiel 36:26 in Kannada 26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
Ezekiel 37:27 in Kannada 27 ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.
Ezekiel 39:22 in Kannada 22 ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.
Hosea 1:10 in Kannada 10 ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
Hosea 2:23 in Kannada 23 ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.
Zechariah 8:8 in Kannada 8 ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”
Zechariah 13:9 in Kannada 9 “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
Matthew 22:32 in Kannada 32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
Romans 9:25 in Kannada 25 ಆ ವಚನವೇನಂದರೆ- “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
Romans 11:27 in Kannada 27 ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
1 Corinthians 6:16 in Kannada 16 ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.
2 Corinthians 3:3 in Kannada 3 ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
2 Corinthians 3:7 in Kannada 7 ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
Titus 2:14 in Kannada 14 ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
Hebrews 10:16 in Kannada 16 “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
Hebrews 11:16 in Kannada 16 ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
James 1:18 in Kannada 18 ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
James 1:21 in Kannada 21 ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
1 Peter 1:23 in Kannada 23 ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.
1 Peter 2:9 in Kannada 9 ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.