Hebrews 8:9 in Kannada 9 ‘ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.
Other Translations King James Version (KJV) Not according to the covenant that I made with their fathers in the day when I took them by the hand to lead them out of the land of Egypt; because they continued not in my covenant, and I regarded them not, saith the Lord.
American Standard Version (ASV) Not according to the covenant that I made with their fathers In the day that I took them by the hand to lead them forth out of the land of Egypt; For they continued not in my covenant, And I regarded them not, saith the Lord.
Bible in Basic English (BBE) Not like the agreement which I made with their fathers when I took them by the hand, to be their guide out of the land of Egypt; for they did not keep the agreement with me, and I gave them up, says the Lord.
Darby English Bible (DBY) not according to the covenant which I made to their fathers in [the] day of my taking their hand to lead them out of the land of Egypt; because *they* did not continue in my covenant, and *I* did not regard them, saith [the] Lord.
World English Bible (WEB) Not according to the covenant that I made with their fathers, In the day that I took them by the hand to lead them out of the land of Egypt; For they didn't continue in my covenant, And I disregarded them," says the Lord.
Young's Literal Translation (YLT) not according to the covenant that I made with their fathers, in the day of My taking `them' by their hand, to bring them out of the land of Egypt -- because they did not remain in My covenant, and I did not regard them, saith the Lord, --
Cross Reference Genesis 19:16 in Kannada 16 ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
Exodus 19:4 in Kannada 4 ‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
Exodus 24:3 in Kannada 3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
Exodus 32:8 in Kannada 8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.
Exodus 34:10 in Kannada 10 ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
Exodus 34:27 in Kannada 27 ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
Deuteronomy 5:2 in Kannada 2 ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.
Deuteronomy 29:1 in Kannada 1 ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.
Deuteronomy 29:12 in Kannada 12 ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,
Deuteronomy 29:25 in Kannada 25 ಅದಕ್ಕೆ ಜನರು, ‘ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.
Deuteronomy 31:16 in Kannada 16 ಯೆಹೋವನು ಮೋಶೆಗೆ, “ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
Joshua 23:15 in Kannada 15 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶ ಮಾಡಿಬಿಡುವನು.
Judges 10:13 in Kannada 13 ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
2 Kings 17:15 in Kannada 15 ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
Job 8:20 in Kannada 20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.
Psalm 77:20 in Kannada 20 ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
Psalm 78:10 in Kannada 10 ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
Psalm 78:52 in Kannada 52 ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
Psalm 78:57 in Kannada 57 ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.
Psalm 105:43 in Kannada 43 ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.
Psalm 136:11 in Kannada 11 ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
Song of Solomon 8:5 in Kannada 5 ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.
Isaiah 24:5 in Kannada 5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
Isaiah 40:11 in Kannada 11 ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
Isaiah 41:13 in Kannada 13 ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
Isaiah 51:18 in Kannada 18 ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.
Isaiah 63:9 in Kannada 9 ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
Isaiah 63:11 in Kannada 11 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
Jeremiah 11:7 in Kannada 7 ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
Jeremiah 22:8 in Kannada 8 ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,
Jeremiah 31:32 in Kannada 32 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
Lamentations 4:16 in Kannada 16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.
Ezekiel 16:8 in Kannada 8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
Ezekiel 16:59 in Kannada 59 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
Ezekiel 20:37 in Kannada 37 “ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.
Amos 5:22 in Kannada 22 ನೀವು ನನಗೆ ದಹನಬಲಿಗಳನ್ನು ಮತ್ತು ಧಾನ್ಯನೈವೇಧ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
Malachi 2:13 in Kannada 13 ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೊಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.
Mark 8:23 in Kannada 23 ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
Acts 9:8 in Kannada 8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
Acts 13:11 in Kannada 11 ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
Galatians 3:15 in Kannada 15 ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
Galatians 4:24 in Kannada 24 ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.
Hebrews 9:18 in Kannada 18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.