Hebrews 9:10 in Kannada 10 ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
Other Translations King James Version (KJV) Which stood only in meats and drinks, and divers washings, and carnal ordinances, imposed on them until the time of reformation.
American Standard Version (ASV) `being' only (with meats and drinks and divers washings) carnal ordinances, imposed until a time of reformation.
Bible in Basic English (BBE) Because they are only rules of the flesh, of meats and drinks and washings, which have their place till the time comes when things will be put right.
Darby English Bible (DBY) [consisting] only of meats and drinks and divers washings, ordinances of flesh, imposed until [the] time of setting things right.
World English Bible (WEB) being only (with meats and drinks and various washings) fleshly ordinances, imposed until a time of reformation.
Young's Literal Translation (YLT) only in victuals, and drinks, and different baptisms, and fleshly ordinances -- till the time of reformation imposed upon `them'.
Cross Reference Exodus 29:4 in Kannada 4 ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.
Exodus 30:19 in Kannada 19 ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.
Exodus 40:12 in Kannada 12 “ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ
Leviticus 11:2 in Kannada 2 “ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,
Leviticus 14:8 in Kannada 8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
Leviticus 16:4 in Kannada 4 ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.
Leviticus 16:24 in Kannada 24 ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.
Leviticus 17:15 in Kannada 15 “‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.
Leviticus 22:6 in Kannada 6 “‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
Numbers 19:7 in Kannada 7 ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
Deuteronomy 14:3 in Kannada 3 ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು.
Deuteronomy 21:6 in Kannada 6 ಹತನಾದ ಮನುಷ್ಯನಿಗೆ ಹತ್ತಿರುವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,
Deuteronomy 23:11 in Kannada 11 ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.
Ezekiel 4:14 in Kannada 14 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,
Mark 7:4 in Kannada 4 ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
Acts 10:13 in Kannada 13 ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ಅವನಿಗೆ ಒಂದು ವಾಣಿ ಕೇಳಿಸಿತು.
Galatians 4:3 in Kannada 3 ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.
Galatians 4:9 in Kannada 9 ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ. ವಿಶೇಷವಾಗಿ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?
Ephesians 1:10 in Kannada 10 ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.
Ephesians 2:15 in Kannada 15 ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.
Colossians 2:16 in Kannada 16 ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.
Colossians 2:20 in Kannada 20 ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
Hebrews 2:5 in Kannada 5 ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.
Hebrews 6:5 in Kannada 5 ದೇವರ ವಾಕ್ಯದ ಶ್ರೇಷ್ಟತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ,
Hebrews 9:1 in Kannada 1 ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿ-ವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.
Hebrews 10:22 in Kannada 22 ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧಿಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
Hebrews 13:9 in Kannada 9 ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.