Hebrews 9:11 in Kannada 11 ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,
Other Translations King James Version (KJV) But Christ being come an high priest of good things to come, by a greater and more perfect tabernacle, not made with hands, that is to say, not of this building;
American Standard Version (ASV) But Christ having come a high priest of the good things to come, through the greater and more perfect tabernacle, not made with hands, that is to say, not of this creation,
Bible in Basic English (BBE) But now Christ has come as the high priest of the good things of the future, through this greater and better Tent, not made with hands, that is to say, not of this world,
Darby English Bible (DBY) But Christ being come high priest of the good things to come, by the better and more perfect tabernacle not made with hand, (that is, not of this creation,)
World English Bible (WEB) But Christ having come as a high priest of the coming good things, through the greater and more perfect tabernacle, not made with hands, that is to say, not of this creation,
Young's Literal Translation (YLT) And Christ being come, chief priest of the coming good things, through the greater and more perfect tabernacle not made with hands -- that is, not of this creation --
Cross Reference Genesis 49:10 in Kannada 10 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
Psalm 40:7 in Kannada 7 ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
Isaiah 59:20 in Kannada 20 “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.
Malachi 3:1 in Kannada 1 “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Matthew 2:6 in Kannada 6 “‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
Matthew 11:3 in Kannada 3 “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
John 1:14 in Kannada 14 ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
John 4:25 in Kannada 25 ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
Acts 7:48 in Kannada 48 ಆದರೂ ಪರಾತ್ಪರನು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.
Acts 17:24 in Kannada 24 “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
2 Corinthians 5:1 in Kannada 1 ನಾವು ತಿಳಿದಿರುವ ಹಾಗೆ ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ಪರಲೋಕದಲ್ಲಿ ದೇವರಿಂದ ನಿರ್ಮಿಸಲಾಗಿರುವ ಒಂದು ಕಟ್ಟಡವು ನಮಗುಂಟು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಅದಕ್ಕೆ ಬದಲಾಗಿ ಪರಲೋಕದಲ್ಲಿ ಒಂದು ಶಾಶ್ವತವಾದ ಮನೆ ನಮಗುಂಟೆಂದು ಬಲ್ಲೆವು.
Colossians 2:11 in Kannada 11 ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.
Hebrews 2:17 in Kannada 17 ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
Hebrews 3:1 in Kannada 1 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
Hebrews 4:15 in Kannada 15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
Hebrews 5:5 in Kannada 5 ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.
Hebrews 7:1 in Kannada 1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
Hebrews 7:11 in Kannada 11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
Hebrews 8:1 in Kannada 1 ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
Hebrews 9:1 in Kannada 1 ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿ-ವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.
Hebrews 9:23 in Kannada 23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
Hebrews 10:1 in Kannada 1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
1 John 4:2 in Kannada 2 ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.
1 John 5:20 in Kannada 20 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
2 John 1:7 in Kannada 7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.