Hebrews 9:12 in Kannada 12 ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯವಿಮೋಚನೆಯನ್ನು ಸಾಧಿಸಿದನು.
Other Translations King James Version (KJV) Neither by the blood of goats and calves, but by his own blood he entered in once into the holy place, having obtained eternal redemption for us.
American Standard Version (ASV) nor yet through the blood of goats and calves, but through his own blood, entered in once for all into the holy place, having obtained eternal redemption.
Bible in Basic English (BBE) And has gone once and for ever into the holy place, having got eternal salvation, not through the blood of goats and young oxen, but through his blood.
Darby English Bible (DBY) nor by blood of goats and calves, but by his own blood, has entered in once for all into the [holy of] holies, having found an eternal redemption.
World English Bible (WEB) nor yet through the blood of goats and calves, but through his own blood, entered in once for all into the Holy Place, having obtained eternal redemption.
Young's Literal Translation (YLT) neither through blood of goats and calves, but through his own blood, did enter in once into the holy places, age-during redemption having obtained;
Cross Reference Leviticus 8:2 in Kannada 2 “ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
Leviticus 9:15 in Kannada 15 ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.
Leviticus 16:5 in Kannada 5 ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
Daniel 9:24 in Kannada 24 ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
Zechariah 3:9 in Kannada 9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’
Mark 3:29 in Kannada 29 ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.
Acts 20:28 in Kannada 28 ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನೇ ಆ ಗುಂಪಿನಲ್ಲಿ ಸಭಾಧ್ಯಕ್ಷರಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
Galatians 3:13 in Kannada 13 ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
Ephesians 1:7 in Kannada 7 ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
Colossians 1:14 in Kannada 14 ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
1 Thessalonians 1:10 in Kannada 10 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
Titus 2:14 in Kannada 14 ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
Hebrews 1:3 in Kannada 3 ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧೀಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Hebrews 5:9 in Kannada 9 ಇದಲ್ಲದೆ ಆತನು ಪರಿಪೂರ್ಣಗೊಳಿಸಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
Hebrews 7:27 in Kannada 27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
Hebrews 9:7 in Kannada 7 ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
Hebrews 9:13 in Kannada 13 ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,
Hebrews 9:15 in Kannada 15 ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
Hebrews 9:24 in Kannada 24 ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
Hebrews 9:28 in Kannada 28 ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
Hebrews 10:4 in Kannada 4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
Hebrews 10:9 in Kannada 9 ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
Hebrews 10:19 in Kannada 19 ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
1 Peter 1:18 in Kannada 18 ನಿಮ್ಮ ಪಿತೃಗಳಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
Revelation 1:5 in Kannada 5 ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,
Revelation 5:9 in Kannada 9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.