Hebrews 9:15 in Kannada 15 ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
Other Translations King James Version (KJV) And for this cause he is the mediator of the new testament, that by means of death, for the redemption of the transgressions that were under the first testament, they which are called might receive the promise of eternal inheritance.
American Standard Version (ASV) And for this cause he is the mediator of a new covenant, that a death having taken place for the redemption of the transgressions that were under the first covenant, they that have been called may receive the promise of the eternal inheritance.
Bible in Basic English (BBE) And for this cause it is through him that a new agreement has come into being, so that after the errors under the first agreement had been taken away by his death, the word of God might have effect for those who were marked out for an eternal heritage.
Darby English Bible (DBY) And for this reason he is mediator of a new covenant, so that, death having taken place for redemption of the transgressions under the first covenant, the called might receive the promise of the eternal inheritance.
World English Bible (WEB) For this reason he is the mediator of a new covenant, since a death has occurred for the redemption of the transgressions that were under the first covenant, that those who have been called may receive the promise of the eternal inheritance.
Young's Literal Translation (YLT) And because of this, of a new covenant he is mediator, that, death having come, for redemption of the transgressions under the first covenant, those called may receive the promise of the age-during inheritance,
Cross Reference Psalm 37:18 in Kannada 18 ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವಾಸ್ತ್ಯವು ಶಾಶ್ವತವಾಗಿ ನಿಲ್ಲುವುದು.
Isaiah 53:10 in Kannada 10 ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
Daniel 9:26 in Kannada 26 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
Matthew 19:29 in Kannada 29 ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.
Matthew 25:34 in Kannada 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ.
Matthew 25:36 in Kannada 36 ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
Mark 10:17 in Kannada 17 ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.
Luke 18:18 in Kannada 18 ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,
John 10:28 in Kannada 28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
Romans 3:24 in Kannada 24 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
Romans 5:6 in Kannada 6 ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
Romans 5:8 in Kannada 8 ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
Romans 5:10 in Kannada 10 ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
Romans 6:23 in Kannada 23 ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
Romans 8:28 in Kannada 28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
Romans 8:30 in Kannada 30 ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
Romans 9:24 in Kannada 24 ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.
2 Corinthians 3:6 in Kannada 6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
Ephesians 1:7 in Kannada 7 ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
2 Thessalonians 2:14 in Kannada 14 ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
1 Timothy 2:5 in Kannada 5 ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
2 Timothy 2:10 in Kannada 10 ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.
Titus 1:2 in Kannada 2 ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
Hebrews 2:14 in Kannada 14 ಇದಲ್ಲದೆ ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
Hebrews 3:1 in Kannada 1 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
Hebrews 6:13 in Kannada 13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,
Hebrews 7:22 in Kannada 22 ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.
Hebrews 8:6 in Kannada 6 ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
Hebrews 8:13 in Kannada 13 ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.
Hebrews 9:12 in Kannada 12 ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯವಿಮೋಚನೆಯನ್ನು ಸಾಧಿಸಿದನು.
Hebrews 9:16 in Kannada 16 ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.
Hebrews 9:28 in Kannada 28 ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
Hebrews 10:36 in Kannada 36 ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
Hebrews 11:13 in Kannada 13 ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.
Hebrews 11:39 in Kannada 39 ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.
Hebrews 12:24 in Kannada 24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
Hebrews 13:20 in Kannada 20 ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
James 1:12 in Kannada 12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ನಿತ್ಯ ಜೀವದ ಕಿರೀಟವನ್ನು ಹೊಂದುವನು.
1 Peter 1:3 in Kannada 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
1 Peter 3:18 in Kannada 18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
1 Peter 5:10 in Kannada 10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
1 John 2:25 in Kannada 25 ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.
Revelation 5:9 in Kannada 9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
Revelation 14:3 in Kannada 3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.