Hebrews 9:24 in Kannada 24 ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
Other Translations King James Version (KJV) For Christ is not entered into the holy places made with hands, which are the figures of the true; but into heaven itself, now to appear in the presence of God for us:
American Standard Version (ASV) For Christ entered not into a holy place made with hands, like in pattern to the true; but into heaven itself, now to appear before the face of God for us:
Bible in Basic English (BBE) For Christ did not go into a holy place which had been made by men's hands as the copy of the true one; but he went into heaven itself, and now takes his place before the face of God for us.
Darby English Bible (DBY) For the Christ is not entered into holy places made with hand, figures of the true, but into heaven itself, now to appear before the face of God for us:
World English Bible (WEB) For Christ hasn't entered into holy places made with hands, which are representations of the true, but into heaven itself, now to appear in the presence of God for us;
Young's Literal Translation (YLT) for not into holy places made with hands did the Christ enter -- figures of the true -- but into the heaven itself, now to be manifested in the presence of God for us;
Cross Reference Exodus 28:12 in Kannada 12 ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋಧಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವಗಳನ್ನು ಧರಿಸಿಕೊಂಡು ಹೋಗುವನು.
Exodus 28:29 in Kannada 29 ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.
Psalm 68:18 in Kannada 18 ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
Zechariah 3:1 in Kannada 1 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
Mark 16:19 in Kannada 19 ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
Luke 24:51 in Kannada 51 ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.
John 2:19 in Kannada 19 ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
John 6:62 in Kannada 62 ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
John 16:28 in Kannada 28 ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.
Acts 1:9 in Kannada 9 ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
Acts 3:21 in Kannada 21 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
Romans 8:33 in Kannada 33 ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
Ephesians 1:20 in Kannada 20 ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
Ephesians 4:8 in Kannada 8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
Colossians 3:2 in Kannada 2 ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.
Hebrews 1:3 in Kannada 3 ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧೀಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Hebrews 6:20 in Kannada 20 ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನಿಧ್ಯವನ್ನು ಪ್ರವೇಶಿಸಿದ್ದಾನೆ.
Hebrews 7:25 in Kannada 25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
Hebrews 8:2 in Kannada 2 ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
Hebrews 8:5 in Kannada 5 ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
Hebrews 9:9 in Kannada 9 ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
Hebrews 9:11 in Kannada 11 ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,
Hebrews 9:23 in Kannada 23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
1 Peter 3:22 in Kannada 22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
1 John 2:1 in Kannada 1 ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
Revelation 8:3 in Kannada 3 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.