Hebrews 9:26 in Kannada 26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.
Other Translations King James Version (KJV) For then must he often have suffered since the foundation of the world: but now once in the end of the world hath he appeared to put away sin by the sacrifice of himself.
American Standard Version (ASV) else must he often have suffered since the foundation of the world: but now once at the end of the ages hath he been manifested to put away sin by the sacrifice of himself.
Bible in Basic English (BBE) For then he would have undergone a number of deaths from the time of the making of the world: but now he has come to us at the end of the old order, to put away sin by the offering of himself.
Darby English Bible (DBY) since he had [then] been obliged often to suffer from the foundation of the world. But now once in the consummation of the ages he has been manifested for [the] putting away of sin by his sacrifice.
World English Bible (WEB) or else he must have suffered often since the foundation of the world. But now once at the end of the ages, he has been revealed to put away sin by the sacrifice of himself.
Young's Literal Translation (YLT) since it had behoved him many times to suffer from the foundation of the world, but now once, at the full end of the ages, for putting away of sin through his sacrifice, he hath been manifested;
Cross Reference Leviticus 16:21 in Kannada 21 ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.
2 Samuel 12:13 in Kannada 13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
2 Samuel 24:10 in Kannada 10 ಖಾನೇಷುಮಾರಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ದಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
Job 7:21 in Kannada 21 ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.
Isaiah 2:2 in Kannada 2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Daniel 9:24 in Kannada 24 ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
Daniel 10:14 in Kannada 14 ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.
Micah 4:1 in Kannada 1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Matthew 25:34 in Kannada 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ.
John 1:29 in Kannada 29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
John 17:24 in Kannada 24 ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
1 Corinthians 10:11 in Kannada 11 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.
Galatians 4:1 in Kannada 1 ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.
Ephesians 1:10 in Kannada 10 ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.
Ephesians 5:2 in Kannada 2 ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
Titus 2:14 in Kannada 14 ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
Hebrews 1:2 in Kannada 2 ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.
Hebrews 4:3 in Kannada 3 ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು’ ಎಂದು ಹೇಳಿದೆಯಲ್ಲಾ.
Hebrews 7:27 in Kannada 27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
Hebrews 9:12 in Kannada 12 ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯವಿಮೋಚನೆಯನ್ನು ಸಾಧಿಸಿದನು.
Hebrews 9:14 in Kannada 14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
Hebrews 10:4 in Kannada 4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
Hebrews 10:10 in Kannada 10 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
Hebrews 10:12 in Kannada 12 ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Hebrews 10:26 in Kannada 26 ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
1 Peter 1:20 in Kannada 20 ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
1 Peter 2:24 in Kannada 24 ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
1 Peter 3:18 in Kannada 18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
1 John 3:5 in Kannada 5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
Revelation 13:8 in Kannada 8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
Revelation 17:8 in Kannada 8 ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.