Hebrews 9:28 in Kannada 28 ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
Other Translations King James Version (KJV) So Christ was once offered to bear the sins of many; and unto them that look for him shall he appear the second time without sin unto salvation.
American Standard Version (ASV) so Christ also, having been once offered to bear the sins of many, shall appear a second time, apart from sin, to them that wait for him, unto salvation.
Bible in Basic English (BBE) So Christ, having at his first coming taken on himself the sins of men, will be seen a second time, without sin, by those who are waiting for him, for their salvation.
Darby English Bible (DBY) thus the Christ also, having been once offered to bear the sins of many, shall appear to those that look for him the second time without sin for salvation.
World English Bible (WEB) so Christ also, having been once offered to bear the sins of many, will appear a second time, without sin, to those who are eagerly waiting for him for salvation.
Young's Literal Translation (YLT) so also the Christ, once having been offered to bear the sins of many, a second time, apart from a sin-offering, shall appear, to those waiting for him -- to salvation!
Cross Reference Leviticus 10:17 in Kannada 17 “ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
Numbers 18:1 in Kannada 1 ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.
Numbers 18:23 in Kannada 23 ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪದಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವಾಸ್ತ್ಯವು ಇರುವುದಿಲ್ಲ.
Isaiah 25:9 in Kannada 9 ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
Isaiah 53:4 in Kannada 4 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
Isaiah 53:11 in Kannada 11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
Zechariah 14:5 in Kannada 5 ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಗೆ ಓಡಿಹೋಗುವಿರಿ; ಏಕೆಂದರೆ ಆ ಡೊಂಗರವು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
Matthew 26:28 in Kannada 28 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸಒಡಂಬಡಿಕೆಯ ರಕ್ತ.
John 14:3 in Kannada 3 ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
Acts 1:11 in Kannada 11 ಅವರ ಹತ್ತಿರ ನಿಂತುಕೊಂಡು “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
Romans 5:15 in Kannada 15 ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
Romans 6:10 in Kannada 10 ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
Romans 8:3 in Kannada 3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
Romans 8:23 in Kannada 23 ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.
1 Corinthians 1:7 in Kannada 7 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮಿಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
1 Corinthians 15:54 in Kannada 54 ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
Philippians 3:20 in Kannada 20 ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
1 Thessalonians 1:10 in Kannada 10 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
1 Thessalonians 4:14 in Kannada 14 ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
2 Thessalonians 1:5 in Kannada 5 ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.
2 Thessalonians 2:1 in Kannada 1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
2 Timothy 4:8 in Kannada 8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
Titus 2:13 in Kannada 13 ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
Hebrews 4:15 in Kannada 15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
Hebrews 9:25 in Kannada 25 ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.
1 Peter 2:24 in Kannada 24 ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
1 Peter 3:18 in Kannada 18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
2 Peter 3:12 in Kannada 12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
1 John 3:2 in Kannada 2 ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂತವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
1 John 3:5 in Kannada 5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
Revelation 1:7 in Kannada 7 ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.