Matthew 10:2 in Kannada 2 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
Other Translations King James Version (KJV) Now the names of the twelve apostles are these; The first, Simon, who is called Peter, and Andrew his brother; James the son of Zebedee, and John his brother;
American Standard Version (ASV) Now the names of the twelve apostles are these: The first, Simon, who is called Peter, and Andrew his brother; James the `son' of Zebedee, and John his brother;
Bible in Basic English (BBE) Now the names of the twelve are these: The first, Simon, who is named Peter, and Andrew, his brother; James, the son of Zebedee, and John, his brother;
Darby English Bible (DBY) Now the names of the twelve apostles are these: first, Simon, who was called Peter, and Andrew his brother; James the [son] of Zebedee, and John his brother;
World English Bible (WEB) Now the names of the twelve apostles are these. The first, Simon, who is called Peter; Andrew, his brother; James the son of Zebedee; John, his brother;
Young's Literal Translation (YLT) And of the twelve apostles the names are these: first, Simon, who is called Peter, and Andrew his brother; James of Zebedee, and John his brother;
Cross Reference Matthew 4:18 in Kannada 18 ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
Matthew 4:21 in Kannada 21 ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
Matthew 16:16 in Kannada 16 ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
Matthew 17:1 in Kannada 1 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
Matthew 20:20 in Kannada 20 ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
Matthew 26:37 in Kannada 37 ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.
Mark 1:16 in Kannada 16 ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
Mark 1:29 in Kannada 29 ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
Mark 3:16 in Kannada 16 ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
Mark 13:3 in Kannada 3 ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
Luke 5:10 in Kannada 10 ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.
Luke 6:13 in Kannada 13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
Luke 9:10 in Kannada 10 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
Luke 11:49 in Kannada 49 ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’
Luke 22:8 in Kannada 8 ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.
Luke 22:14 in Kannada 14 ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.
John 1:40 in Kannada 40 ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.
John 6:8 in Kannada 8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
John 12:22 in Kannada 22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
John 13:23 in Kannada 23 ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.
John 20:2 in Kannada 2 ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
John 21:2 in Kannada 2 ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
John 21:20 in Kannada 20 ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
John 21:24 in Kannada 24 ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
Acts 1:13 in Kannada 13 ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
Acts 1:26 in Kannada 26 ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.
Acts 3:1 in Kannada 1 ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.
Acts 12:2 in Kannada 2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
1 Corinthians 15:7 in Kannada 7 ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು.
Ephesians 4:11 in Kannada 11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.
Hebrews 3:1 in Kannada 1 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
1 Peter 1:1 in Kannada 1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
2 Peter 1:1 in Kannada 1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
1 John 1:3 in Kannada 3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
2 John 1:1 in Kannada 1 ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
3 John 1:1 in Kannada 1 ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;
Revelation 1:1 in Kannada 1 ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.
Revelation 1:9 in Kannada 9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.
Revelation 18:20 in Kannada 20 ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.
Revelation 22:8 in Kannada 8 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.