Matthew 10:28 in Kannada 28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
Other Translations King James Version (KJV) And fear not them which kill the body, but are not able to kill the soul: but rather fear him which is able to destroy both soul and body in hell.
American Standard Version (ASV) And be not afraid of them that kill the body, but are not able to kill the soul: but rather fear him who is able to destroy both soul and body in hell.
Bible in Basic English (BBE) And have no fear of those who put to death the body, but are not able to put to death the soul. But have fear of him who has power to give soul and body to destruction in hell.
Darby English Bible (DBY) And be not afraid of those who kill the body, but cannot kill the soul; but fear rather him who is able to destroy both soul and body in hell.
World English Bible (WEB) Don't be afraid of those who kill the body, but are not able to kill the soul. Rather, fear him who is able to destroy both soul and body in Gehenna.
Young's Literal Translation (YLT) `And be not afraid of those killing the body, and are not able to kill the soul, but fear rather Him who is able both soul and body to destroy in gehenna.
Cross Reference Psalm 119:120 in Kannada 120 ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
Ecclesiastes 5:7 in Kannada 7 ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.
Ecclesiastes 8:12 in Kannada 12 ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
Isaiah 8:12 in Kannada 12 “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
Isaiah 51:7 in Kannada 7 ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.
Isaiah 51:12 in Kannada 12 ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
Isaiah 66:2 in Kannada 2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
Jeremiah 5:22 in Kannada 22 ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
Daniel 3:10 in Kannada 10 ಪ್ರಭುವೇ, ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.
Matthew 5:22 in Kannada 22 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿನರಕಕ್ಕೆ ಗುರಿಯಾಗುವನು.
Matthew 10:26 in Kannada 26 ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.
Matthew 25:46 in Kannada 46 ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.
Mark 9:43 in Kannada 43 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
Luke 12:4 in Kannada 4 “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
Luke 16:22 in Kannada 22 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
John 5:29 in Kannada 29 ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
Acts 20:23 in Kannada 23 ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
Acts 21:13 in Kannada 13 ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
Romans 8:35 in Kannada 35 ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
2 Thessalonians 1:8 in Kannada 8 ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
2 Timothy 4:6 in Kannada 6 ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
Hebrews 10:31 in Kannada 31 ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
Hebrews 11:35 in Kannada 35 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
Hebrews 12:28 in Kannada 28 ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
James 4:12 in Kannada 12 ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?
1 Peter 3:14 in Kannada 14 ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
Revelation 2:10 in Kannada 10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
Revelation 20:10 in Kannada 10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.