Matthew 11:11 in Kannada 11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Other Translations King James Version (KJV) Verily I say unto you, Among them that are born of women there hath not risen a greater than John the Baptist: notwithstanding he that is least in the kingdom of heaven is greater than he.
American Standard Version (ASV) Verily I say unto you, Among them that are born of women there hath not arisen a greater than John the Baptist: yet he that is but little in the kingdom of heaven is greater than he.
Bible in Basic English (BBE) Truly I say to you, Among the sons of women there has not been a greater than John the Baptist: but he who is least in the kingdom of heaven is greater than he.
Darby English Bible (DBY) Verily I say to you, that there is not arisen among [the] born of women a greater than John the baptist. But he who is a little one in the kingdom of the heavens is greater than he.
World English Bible (WEB) Most assuredly I tell you, among those who are born of women there has not arisen anyone greater than John the Baptizer; yet he who is least in the Kingdom of Heaven is greater than he.
Young's Literal Translation (YLT) Verily I say to you, there hath not risen, among those born of women, a greater than John the Baptist, but he who is least in the reign of the heavens is greater than he.
Cross Reference 1 Samuel 2:30 in Kannada 30 ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
Job 14:1 in Kannada 1 “ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.
Job 14:4 in Kannada 4 ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.
Job 15:14 in Kannada 14 ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
Job 25:4 in Kannada 4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
Psalm 51:5 in Kannada 5 ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
Isaiah 30:26 in Kannada 26 ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
Zechariah 12:8 in Kannada 8 ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
Matthew 3:11 in Kannada 11 ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
Matthew 5:19 in Kannada 19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
Luke 1:15 in Kannada 15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
Luke 7:28 in Kannada 28 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.
Luke 9:48 in Kannada 48 ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.
John 1:15 in Kannada 15 ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.
John 1:27 in Kannada 27 ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.
John 3:30 in Kannada 30 ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
John 5:35 in Kannada 35 ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
John 7:39 in Kannada 39 ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
John 10:41 in Kannada 41 ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು.
Romans 16:25 in Kannada 25 ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
1 Corinthians 6:4 in Kannada 4 ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನೀವು ಕರೆಯಲ್ಪಟ್ಟಿದ್ದರೆ ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ನೇಮಿಸಿರಿ?
1 Corinthians 15:9 in Kannada 9 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
Ephesians 2:3 in Kannada 3 ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
Ephesians 3:8 in Kannada 8 ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ
Colossians 1:26 in Kannada 26 ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.
2 Timothy 1:10 in Kannada 10 ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.
Hebrews 11:40 in Kannada 40 ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.
1 Peter 1:10 in Kannada 10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.