Matthew 11:21 in Kannada 21 ಹೇಗಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
Other Translations King James Version (KJV) Woe unto thee, Chorazin! woe unto thee, Bethsaida! for if the mighty works, which were done in you, had been done in Tyre and Sidon, they would have repented long ago in sackcloth and ashes.
American Standard Version (ASV) Woe unto thee, Chorazin! woe unto thee, Bethsaida! for if the mighty works had been done in Tyre and Sidon which were done in you, they would have repented long ago in sackcloth and ashes.
Bible in Basic English (BBE) Unhappy are you, Chorazin! Unhappy are you, Beth-saida! For if the works of power which were done in you had been done in Tyre and Sidon, they would have been turned from their sins in days gone by, clothing themselves in haircloth and putting dust on their heads.
Darby English Bible (DBY) Woe to thee, Chorazin! woe to thee Bethsaida! for if the works of power which have taken place in you, had taken place in Tyre and Sidon, they had long ago repented in sackcloth and ashes.
World English Bible (WEB) "Woe to you, Chorazin! Woe to you, Bethsaida! For if the mighty works had been done in Tyre and Sidon which were done in you, they would have repented long ago in sackcloth and ashes.
Young's Literal Translation (YLT) `Wo to thee, Chorazin! wo to thee, Bethsaida! because, if in Tyre and Sidon had been done the mighty works that were done in you, long ago in sackcloth and ashes they had reformed;
Cross Reference Job 42:6 in Kannada 6 ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.
Jeremiah 13:27 in Kannada 27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?
Ezekiel 3:6 in Kannada 6 ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಒಳಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
Matthew 11:22 in Kannada 22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
Matthew 12:41 in Kannada 41 ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.
Matthew 15:21 in Kannada 21 ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತಗಳಿಗೆ ಹೋದನು.
Matthew 18:7 in Kannada 7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
Matthew 23:13 in Kannada 13 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
Matthew 26:24 in Kannada 24 ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನಿಗೆ ಆಯ್ಯೋ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
Mark 3:8 in Kannada 8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
Mark 6:45 in Kannada 45 ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.
Mark 7:24 in Kannada 24 ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
Mark 7:31 in Kannada 31 ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
Mark 8:22 in Kannada 22 ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
Luke 4:26 in Kannada 26 ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.
Luke 6:17 in Kannada 17 ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
Luke 9:10 in Kannada 10 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
Luke 10:13 in Kannada 13 ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
Luke 11:42 in Kannada 42 “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.
John 1:44 in Kannada 44 ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.
John 3:5 in Kannada 5 ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
John 12:21 in Kannada 21 ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
Acts 12:20 in Kannada 20 ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.
Acts 13:44 in Kannada 44 ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
Acts 27:3 in Kannada 3 ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.
Acts 28:25 in Kannada 25 ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
Jude 1:11 in Kannada 11 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.