Matthew 11:25 in Kannada 25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಪಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಂಥವರಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
Other Translations King James Version (KJV) At that time Jesus answered and said, I thank thee, O Father, Lord of heaven and earth, because thou hast hid these things from the wise and prudent, and hast revealed them unto babes.
American Standard Version (ASV) At that season Jesus answered and said, I thank thee, O Father, Lord of heaven and earth, that thou didst hide these things from the wise and understanding, and didst reveal them unto babes:
Bible in Basic English (BBE) At that time Jesus made answer and said, I give praise to you, O Father, Lord of heaven and earth, because you have kept these things secret from the wise and the men of learning, and have made them clear to little children.
Darby English Bible (DBY) At that time, Jesus answering said, I praise thee, Father, Lord of the heaven and of the earth, that thou hast hid these things from the wise and prudent, and hast revealed them to babes.
World English Bible (WEB) At that time, Jesus answered, "I thank you, Father, Lord of heaven and earth, that you hid these things from the wise and understanding, and revealed them to infants.
Young's Literal Translation (YLT) At that time Jesus answering said, `I do confess to Thee, Father, Lord of the heavens and of the earth, that thou didst hide these things from wise and understanding ones, and didst reveal them to babes.
Cross Reference Genesis 14:19 in Kannada 19 ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
Genesis 14:22 in Kannada 22 ಅಬ್ರಾಮನು, ಸೊದೋಮಿನ ಅರಸನಿಗೆ,
Deuteronomy 10:14 in Kannada 14 ನಿಮ್ಮಿಂದ ಬೇರೇನು ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
1 Samuel 2:18 in Kannada 18 ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
1 Samuel 3:4 in Kannada 4 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,
2 Kings 19:15 in Kannada 15 ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
1 Chronicles 29:13 in Kannada 13 ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.
Psalm 8:2 in Kannada 2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
Isaiah 5:21 in Kannada 21 ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.
Isaiah 29:10 in Kannada 10 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
Isaiah 29:18 in Kannada 18 ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
Isaiah 66:1 in Kannada 1 ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
Jeremiah 1:5 in Kannada 5 “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
Daniel 2:23 in Kannada 23 ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.
Daniel 4:35 in Kannada 35 ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
Matthew 13:11 in Kannada 11 ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
Matthew 16:17 in Kannada 17 ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
Matthew 18:3 in Kannada 3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 21:16 in Kannada 16 ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಪಡಿಸಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.
Mark 4:10 in Kannada 10 ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.
Mark 10:14 in Kannada 14 ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
Luke 10:21 in Kannada 21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
Luke 22:42 in Kannada 42 “ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.
John 7:48 in Kannada 48 ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?
John 9:39 in Kannada 39 ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
John 11:41 in Kannada 41 ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
John 12:38 in Kannada 38 ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
Acts 17:24 in Kannada 24 “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
Romans 11:8 in Kannada 8 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
1 Corinthians 1:18 in Kannada 18 ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.
1 Corinthians 2:6 in Kannada 6 ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.
1 Corinthians 3:18 in Kannada 18 ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”
2 Corinthians 3:14 in Kannada 14 ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಆ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
2 Corinthians 4:3 in Kannada 3 ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.
2 Thessalonians 2:13 in Kannada 13 ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.