Matthew 11:5 in Kannada 5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
Other Translations King James Version (KJV) The blind receive their sight, and the lame walk, the lepers are cleansed, and the deaf hear, the dead are raised up, and the poor have the gospel preached to them.
American Standard Version (ASV) the blind receive their sight, and the lame walk, the lepers are cleansed, and the deaf hear, and the dead are raised up, and the poor have good tidings preached to them.
Bible in Basic English (BBE) The blind see; those who were not able to, are walking; lepers are made clean; those who were without hearing, now have their ears open; the dead come to life again, and the poor have the good news given to them.
Darby English Bible (DBY) Blind [men] see and lame walk; lepers are cleansed, and deaf hear; and dead are raised, and poor have glad tidings preached to them:
World English Bible (WEB) the blind receive their sight, the lame walk, the lepers are cleansed, the deaf hear, the dead are raised up, and the poor have good news preached to them.
Young's Literal Translation (YLT) blind receive sight, and lame walk, lepers are cleansed, and deaf hear, dead are raised, and poor have good news proclaimed,
Cross Reference 2 Kings 5:7 in Kannada 7 ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.
2 Kings 5:14 in Kannada 14 ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.
Psalm 22:26 in Kannada 26 ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ನಿಮ್ಮ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
Psalm 72:12 in Kannada 12 ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
Psalm 146:8 in Kannada 8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
Isaiah 29:18 in Kannada 18 ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
Isaiah 35:4 in Kannada 4 ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
Isaiah 42:6 in Kannada 6 “ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
Isaiah 43:8 in Kannada 8 ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
Isaiah 61:1 in Kannada 1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
Isaiah 66:2 in Kannada 2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
Zechariah 11:7 in Kannada 7 ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.
Matthew 5:3 in Kannada 3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
Matthew 8:1 in Kannada 1 ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.
Matthew 9:24 in Kannada 24 “ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
Matthew 9:30 in Kannada 30 ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
Matthew 10:8 in Kannada 8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
Matthew 15:30 in Kannada 30 ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
Matthew 21:14 in Kannada 14 ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.
Mark 7:37 in Kannada 37 ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
Mark 9:25 in Kannada 25 ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
Luke 4:18 in Kannada 18 “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
Luke 7:14 in Kannada 14 ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.
Luke 7:21 in Kannada 21 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಖಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.
John 2:23 in Kannada 23 ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
John 3:2 in Kannada 2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
John 5:36 in Kannada 36 ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
John 10:25 in Kannada 25 ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.
John 10:38 in Kannada 38 ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.
John 11:43 in Kannada 43 ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
John 14:11 in Kannada 11 ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
Acts 2:22 in Kannada 22 “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
Acts 3:2 in Kannada 2 ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
Acts 4:9 in Kannada 9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
Acts 14:8 in Kannada 8 ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.
James 2:5 in Kannada 5 ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?