Matthew 12:18 in Kannada 18 “ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
Other Translations King James Version (KJV) Behold my servant, whom I have chosen; my beloved, in whom my soul is well pleased: I will put my spirit upon him, and he shall shew judgment to the Gentiles.
American Standard Version (ASV) Behold, my servant whom I have chosen; My beloved in whom my soul is well pleased: I will put my Spirit upon him, And he shall declare judgment to the Gentiles.
Bible in Basic English (BBE) See my servant, the man of my selection, my loved one in whom my soul is well pleased: I will put my Spirit on him, and he will make my decision clear to the Gentiles.
Darby English Bible (DBY) Behold my servant, whom I have chosen, my beloved, in whom my soul has found its delight. I will put my Spirit upon him, and he shall shew forth judgment to the nations.
World English Bible (WEB) "Behold, my servant whom I have chosen; My beloved in whom my soul is well pleased: I will put my Spirit on him. He will proclaim justice to the Gentiles.
Young's Literal Translation (YLT) `Lo, My servant, whom I did choose, My beloved, in whom My soul did delight, I will put My Spirit upon him, and judgment to the nations he shall declare,
Cross Reference Psalm 89:19 in Kannada 19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
Isaiah 11:2 in Kannada 2 ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
Isaiah 32:15 in Kannada 15 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
Isaiah 42:1 in Kannada 1 ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
Isaiah 49:1 in Kannada 1 ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
Isaiah 49:5 in Kannada 5 ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.
Isaiah 52:13 in Kannada 13 ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.
Isaiah 53:11 in Kannada 11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
Isaiah 59:20 in Kannada 20 “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.
Isaiah 60:2 in Kannada 2 ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
Isaiah 61:1 in Kannada 1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
Isaiah 62:2 in Kannada 2 ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.
Jeremiah 16:19 in Kannada 19 ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
Zechariah 3:8 in Kannada 8 ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.
Matthew 3:16 in Kannada 16 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.
Matthew 17:5 in Kannada 5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
Mark 1:11 in Kannada 11 ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
Mark 9:7 in Kannada 7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
Luke 3:22 in Kannada 22 ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.
Luke 4:18 in Kannada 18 “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
Luke 9:35 in Kannada 35 ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.
Luke 23:35 in Kannada 35 ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
John 1:32 in Kannada 32 ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
John 3:34 in Kannada 34 ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
Acts 10:38 in Kannada 38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
Acts 11:18 in Kannada 18 ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Acts 13:46 in Kannada 46 ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
Acts 14:27 in Kannada 27 ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
Acts 26:17 in Kannada 17 ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು.
Romans 15:9 in Kannada 9 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
Ephesians 1:6 in Kannada 6 ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
Ephesians 2:11 in Kannada 11 ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
Ephesians 3:5 in Kannada 5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
Philippians 2:6 in Kannada 6 ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
Colossians 1:1 in Kannada 1 ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,
Colossians 1:13 in Kannada 13 ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
1 Peter 2:4 in Kannada 4 ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.
2 Peter 1:17 in Kannada 17 ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.