Matthew 13:22 in Kannada 22 ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.
Other Translations King James Version (KJV) He also that received seed among the thorns is he that heareth the word; and the care of this world, and the deceitfulness of riches, choke the word, and he becometh unfruitful.
American Standard Version (ASV) And he that was sown among the thorns, this is he that heareth the word; and the care of the world, and the deceitfulness of riches, choke the word, and he becometh unfruitful.
Bible in Basic English (BBE) And that which was dropped among the thorns, this is he who has the word; and the cares of this life, and the deceits of wealth, put a stop to the growth of the word and it gives no fruit.
Darby English Bible (DBY) And he that is sown among the thorns -- this is he who hears the word, and the anxious care of this life, and the deceit of riches choke the word, and he becomes unfruitful.
World English Bible (WEB) What was sown among the thorns, this is he who hears the word, but the cares of this age and the deceitfulness of riches choke the word, and he becomes unfruitful.
Young's Literal Translation (YLT) `And that sown toward the thorns, this is he who is hearing the word, and the anxiety of this age, and the deceitfulness of the riches, do choke the word, and it becometh unfruitful.
Cross Reference Genesis 13:10 in Kannada 10 ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
Joshua 7:20 in Kannada 20 ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡ್ದಿದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ” ಎಂದನು.
2 Kings 5:20 in Kannada 20 ನಾಮಾನನು ಸ್ವಲ್ಪ ದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.
Psalm 52:7 in Kannada 7 “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
Psalm 62:10 in Kannada 10 ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರ ಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
Proverbs 11:28 in Kannada 28 ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.
Proverbs 23:5 in Kannada 5 ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
Ecclesiastes 4:8 in Kannada 8 ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸ ಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
Ecclesiastes 5:10 in Kannada 10 ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
Ecclesiastes 5:13 in Kannada 13 ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.
Jeremiah 4:3 in Kannada 3 ಯೆಹೋವನು ಯೆಹೂದದವರಿಗು ಮತ್ತು ಯೆರೂಸಲೇಮಿನವರಿಗು, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
Matthew 6:24 in Kannada 24 “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
Matthew 13:7 in Kannada 7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
Matthew 19:16 in Kannada 16 ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.
Mark 4:18 in Kannada 18 ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;
Mark 10:23 in Kannada 23 ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
Luke 8:14 in Kannada 14 ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
Luke 12:15 in Kannada 15 ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
Luke 12:21 in Kannada 21 ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.
Luke 12:29 in Kannada 29 ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.
Luke 14:16 in Kannada 16 ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.
Luke 18:24 in Kannada 24 ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.
Luke 21:34 in Kannada 34 “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
Acts 5:1 in Kannada 1 ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ
Acts 8:18 in Kannada 18 ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
1 Timothy 6:9 in Kannada 9 ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
1 Timothy 6:17 in Kannada 17 ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
2 Timothy 4:10 in Kannada 10 ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.
2 Peter 2:14 in Kannada 14 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
1 John 2:15 in Kannada 15 ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
Jude 1:11 in Kannada 11 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.